ಹಿಮಾಚಲ ಪ್ರದೇಶ: ನನ್ನ ಜನ್ಮಭೂಮಿ ಹಿಮಾಚಲ ಪ್ರದೇಶದಲ್ಲಿ ಜನರ ಸೇವೆಯನ್ನು ಮುಂದುವರಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿಯವರ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಗುರಿಯಲ್ಲಿ ನಾನು ಸೈನಿಕನಾಗಿ ಕೆಲಸ ಮಾಡುತ್ತೇನೆ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪರ್ಧಿಯಾಗಿ ಮಂಡಿಯಲ್ಲಿ ಗೆದ್ದು ಬೀಗಿದ ಕಂಗನಾ ಮೊದಲ ಗೆಲುವಿನ ಖುಷಿಯನ್ನು ನರೇಂದ್ರ ಮೋದಿಯವರಿಗೆ ಕಂಗನಾ ಅರ್ಪಣೆ ಮಾಡಿದ್ದಾರೆ.
ಬಹುಶಃ, ಬೇರೊಬ್ಬರು ತಮ್ಮ ಬ್ಯಾಗ್ ಪ್ಯಾಕ್ ಮಾಡಿ ಹೊರಡಬೇಕಾಗುತ್ತದೆ. ಆದರೆ ನಾನು ಇಲ್ಲಿ ಇದ್ದೇ ಇರುತ್ತೇನೆ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ಮುಂದೆ ಕಂಗನಾ ಅವರು ಪಣ ತೊಟ್ಟಂತೆ ಸ್ಪರ್ಧೆ ಮಾಡಿ ಗೆದ್ದು ತೋರಿಸಿದ್ದಾರೆ. ಇದೀಗ ಕಂಗನಾ ಆಡಿದ ಮಾತಿನಂತೆ ಬಾಲಿವುಡ್ ಬಿಡ್ತೀರಾ ಎಂದು ಫ್ಯಾನ್ಸ್ ಪ್ರಶ್ನಿಸಿದ್ದಾರೆ.
ಇತ್ತೀಚಿನ ಸಂದರ್ಶನವೊಂದರಲ್ಲಿ ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಬಾಲಿವುಡ್‌ಗೆ ವಿದಾಯ ಹೇಳುತ್ತೇನೆ ಎಂದು ನಟಿ ಹೇಳಿದ್ದರು. ಹಾಗಾದ್ರೆ ನಟಿ ಬಾಲಿವುಡ್‌ಗೆ ಗುಡ್ ಬೈ ಹೇಳ್ತಾರಾ ಎಂದು ನೆಟ್ಟಿಗರಲ್ಲಿ ಈಗಾಗಲೇ ಚರ್ಚೆ ಶುರುವಾಗಿದೆ. ಬಾಲಿವುಡ್ ಬಿಡ್ತೀರಾ ಎಂದು ನಟಿಗೆ ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ.

