News Karnataka Kannada
Sunday, May 12 2024
ಮನರಂಜನೆ

ಸದ್ಯಕ್ಕಿಲ್ಲ ಉಪೇಂದ್ರ ನಟನೆಯ ‘ಬುದ್ಧಿವಂತ-2’ ರಿಲೀಸ್‌

buddivantha 2 poster
Photo Credit : News Kannada

ಉಪೇಂದ್ರ ನಟನೆಯ ‘ಬುದ್ಧಿವಂತ-2’ ಬಿಡುಗಡೆ ಮುಂದೂಡಲ್ಪಟ್ಟಿದೆ. ಈ ಹಿಂದೆ ಸೆ.15ರಂದು ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿತ್ತು. ‘ಸಿನಿಮಾ ಬಿಡುಗಡೆ ದಿನಾಂಕವನ್ನು ತಾಂತ್ರಿಕ ಕಾರಣಗಳಿಂದ ಮುಂದೂಡಲಾಗಿದೆ. ಬಿಡುಗಡೆಯ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸಲಾಗುತ್ತದೆ’ ಎಂದಿದ್ದಾರೆ ಉಪೇಂದ್ರ.

ಸೆ.18ರಂದು ಉಪೇಂದ್ರ ಅವರ ಜನ್ಮದಿನವಿದೆ. ಈ ಸಂದರ್ಭದಲ್ಲೇ ಸಿನಿಮಾ ಬಿಡುಗಡೆಗೆ ಚಿತ್ರತಂಡ ನಿರ್ಧರಿಸಿತ್ತು. ಚಿತ್ರದಲ್ಲಿ ಉಪೇಂದ್ರ ಅವರಿಗೆ ನಾಯಕಿಯರಾಗಿ ಸೋನಲ್‌ ಮೊಂತೆರೋ ಹಾಗೂ ಮೇಘನರಾಜ್ ನಟಿಸಿದ್ದಾರೆ. ಶ್ರೀನಗರ ಕಿಟ್ಟಿ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ನಿರ್ಮಾಪಕ ಟಿ.ಆರ್ ಚಂದ್ರಶೇಖರ್, ತಮ್ಮ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಲಾಂಛನದಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಜೈದೇವ್ ನಿರ್ದೇಶನದ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು