ಬೆಂಗಳೂರು: ಕನ್ನಡತಿ ಸೀರಿಯಲ್​ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದ ನಟ ಕಿರಣ್ ರಾಜ್ ಕಾರು ಅಪಘಾತಕ್ಕಿಡಾಗಿದೆ. ನಟ ಕಿರಣ್​ ರಾಜ್​ ಅವರು ಇದ್ದ ಕಾರು ಕೆಂಗೇರಿ ಬಳಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ.

ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಕಿರಣ್ ರಾಜ್ ಅವರ ಎದೆಯ ಭಾಗಕ್ಕೆ ಪೆಟ್ಟು ಬಿದ್ದಿದೆ. ಆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ನಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.