ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ವಿನೋದ್ ʻಕರಿಮಣಿʼ, ʻಶಾಂತಂ ಪಾಪಂʼ ಸೇರಿದಂತೆ ಹಲವು ಧಾರವಾಹಿಗಳಿಗೆ ನಿರ್ದೇಶನ ಮಾಡಿದ್ದರು. ಸದ್ಯ ನಿನಾಸಮ್ ಸತೀಶ್ ನಟನೆಯ ʻಅಶೋಕ ಬ್ಲೇಡ್ʼ ಚಿತ್ರ ನಿರ್ದೇಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಮುಂದಿನ ವಾರದಿಂದ ಚಿತ್ರೀಕರಣ ಶುರು ಮಾಡಬೇಕಿತ್ತು.

ನಿನ್ನೆ ಸಂಜೆಯಷ್ಟೇ ನಿನಾಸಂ ಸತೀಶ್ ಮತ್ತು ಚಿತ್ರತಂಡದ ಜೊತೆ ಮಾತನಾಡಿ ವಿನೋದ್ ದೊಂಡಾಲೆ ಬಂದಿದ್ದರು ಎನ್ನಲಾಗಿದೆ. ವಿನೋದ್ ವಿ ದೋಂಡಾಲೆ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಿರ್ದೇಶಕ. ಪಿ.ಶೇಷಾದ್ರಿ, ಟಿ.ಎನ್, ಸೀತಾರಾಂ ಅವರ ಜೊತೆ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಸಂಚಿಕೆ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ಇನ್ನೂ ಕೆಲವು ಸಿನಿಮಾಗಳ ಎರಡನೇ ಭಾಗದ ಚಿತ್ರೀಕರಣ ನಡೆಯುತ್ತಿದೆ. ಈಗ ಸತೀಶ್‌ ನೀನಾಸಂ ನಟನೆಯ ‘ಅಶೋಕ ಬ್ಲೇಡ್‌’ ಸಿನಿಮಾ ಸಹ ಎರಡು ಭಾಗಗಳಲ್ಲಿ ರಿಲೀಸ್‌ ಆಗಲಿದೆ.

ಅವರ ವೃತ್ತಿ ಬದುಕಿನ ಬಹಳ ವಿಶೇಷ ಸಿನಿಮಾ ಎಂದೇ ಅನಿಸಿಕೊಂಡಿರುವ ಮತ್ತು ಬಿಗ್‌ ಬಜೆಟ್‌ನಲ್ಲಿ ತಯಾರಾಗುತ್ತಿರುವ ಈ ಸಿನಿಮಾವನ್ನು ವಿನೋದ್‌ ವಿ ದೊಂಡಾಲೆ ನಿರ್ದೇಶನ ಮಾಡುತ್ತಿದ್ದಾರೆ. 70ರ ದಶಕದಲ್ಲಿ ನಡೆಯಲಿರುವ ಇದರ ಕಥೆಯನ್ನು ಎರಡು ಭಾಗಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಯೋಚನೆ ಮಾಡಿದೆ.