ಕನ್ನಡ ಚಿತ್ರರಂಗದ ದಶಕಗಳ ರಾಷ್ಟ್ರಪ್ರಶಸ್ತಿ ಬರವನ್ನು ನಟ ರಿಷಬ್ ಶೆಟ್ಟಿ ನೀಗಿಸಿದ್ದಾರೆ. ರಿಷಬ್ ಶೆಟ್ಟಿ ಅವರ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪ್ರಾಪ್ತಿಯಾಗಿದೆ. ‘ಕಾಂತಾರ’ ಸಿನಿಮಾದ ಅತ್ಯುತ್ತಮ ನಟನೆಯನ್ನು ಪರಿಗಣಿಸಿ ಅವರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಕನ್ನಡ ಸಿನಿಮಾ ನಟರೊಬ್ಬರಿಗೆ ರಾಷ್ಟ್ರಪ್ರಶಸ್ತಿ ದೊರೆತು ದಶಕಗಳೇ ಆಗಿಬಿಟ್ಟಿದ್ದವು. ಆ ಬರವನ್ನು ಈಗ ನೀಗಿದ್ದು, ನಟ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ದೊರೆತಿದೆ.
‘ಕಾಂತಾರ’ ಸಿನಿಮಾದ ಅತ್ಯುತ್ತಮ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ದೊರೆತಿದೆ. ಈ ವರ್ಷ ರಿಷಬ್ ಶೆಟ್ಟಿಗೆ ಮಲಯಾಳಂ ನಟ ಮಮ್ಮುಟಿ, ಹಿಂದಿಯ ವಿಕ್ರಾಂತ್ ಮೆಸ್ಸಿ ಇನ್ನೂ ಹಲವು ನಟರಿಂದ ಸ್ಪರ್ಧೆ ಇತ್ತು. ಆದರೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಒಲಿದಿದೆ.