Bengaluru 27°C
Ad

‘ಮ್ಯಾಕ್ಸ್’ ಸಿನಿಮಾ ರಿಲೀಸ್ ಕುರಿತು ಫ್ಯಾನ್ಸ್‌ ಗೆ ಗುಡ್‌ ನ್ಯೂಸ್‌ ಕೊಟ್ಟ ಕಿಚ್ಚ ಸುದೀಪ್

Max

ಕಿಚ್ಚ ಸುದೀಪ್ ನಟನೆಯ ಮ್ಯಾಕ್ಸ್ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ. ಮ್ಯಾಕ್ಸ್ ಸಿನಿಮಾದ ಅಪ್ ಡೇಟ್ ಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ. ಆದರೆ ಇತ್ತೀಚೆಗೆ ಸುದೀಪ್ ಮಾಧ್ಯಮದ ಮುಂದೆ ಬಂದಿರಲಿಲ್ಲ. ಆದರೆ ಇತ್ತೀಚೆಗೆ ಕಾರ್ತಿಕ್ ಮಹೇಶ್ ನಟನೆಯ ‘ರಾಮರಸ’ ಲಾಂಚ್​ಗೆ ಆಗಮಿಸಿದ್ದ ಸುದೀಪ್ ಇದೇ ವೇಳೆ ಮ್ಯಾಕ್ಸ್ ಸಿನಿಮಾದ ಕುರಿತು ಮಾಹಿತಿ ನೀಡಿದ್ದಾರೆ.

‘ವಿಕ್ರಾಂತ್ ರೋಣ’ ಬಳಿಕ ಸುದೀಪ್ ಅವರು ಒಂದು ಬ್ರೇಕ್ ಪಡೆದಿದ್ದರು. ರಾಜಕೀಯ ಪ್ರಚಾರದಲ್ಲೂ ಭಾಗಿ ಆದರು. ಹೀಗಾಗಿ, ಅವರ ಸಿನಿಮಾ ತೆರೆಮೇಲೆ ಬರದೆ ಎರಡು ವರ್ಷಗಳು ಕಳೆದಿವೆ. ಈಗ ಸುದೀಪ್ ‘ಮ್ಯಾಕ್ಸ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರು ಚಿತ್ರದ ಬಗ್ಗೆ ಅಪ್​ಡೇಟ್ ನೀಡಿದ್ದಾರೆ. ಸಿನಿಮಾ ಆಗಸ್ಟ್​ ವೇಳೆಗೆ ರಿಲೀಸ್ ಆಗಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

‘ಮ್ಯಾಕ್ಸ್’ ಚಿತ್ರದ ಡಬ್ಬಿಂಗ್ ಕೆಲಸ ಪೂರ್ಣಗೊಂಡಿದೆಯಂತೆ. ‘ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಆಗಸ್ಟ್​ನಲ್ಲಿ ಸಿನಿಮಾ ಬರಬಹುದು ಅಂದುಕೊಂಡಿದ್ದೇವೆ’ ಎಂದಿದ್ದಾರೆ ಸುದೀಪ್. ಕೆಲಸ ಸ್ವಲ್ಪ ವಿಳಂಬ ಆದರೂ ಸೆಪ್ಟೆಂಬರ್ ವೇಳೆಗೆ ಚಿತ್ರವನ್ನು ಕಣ್ತುಂಬಿಕೊಳ್ಳಬಹುದು ಎಂದು ಸುದೀಪ್ ಹೇಳಿದ್ದಾರೆ.

‘ಮ್ಯಾಕ್ಸ್’ ಚಿತ್ರಕ್ಕೆ ವಿಜಯ್ ಕಾರ್ತಿಕೇಯ ಅವರು ನಿರ್ದೇಶನ ಮಾಡಿದ್ದಾರೆ. ಕಿಚ್ಚ ಸುದೀಪ್, ವರಲಕ್ಷ್ಮಿ ಶರತ್​ಕುಮಾರ್, ಸಂಯುಕ್ತಾ ಹೊರನಾಡು, ಸುಕೃತಾ ವಾಘ್ಲೆ, ಪ್ರಮೋದ್ ಶೆಟ್ಟಿ, ಇಳವರಸು ಮೊದಲಾದವರು ನಟಿಸಿದ್ದಾರೆ. ಕಲೈಪುಲಿ ಎಸ್​. ಧನು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕಿಚ್ಚ ಸುದೀಪ್ ಮ್ಯಾಕ್ಸ್ ಸಿನಿಮಾದಲ್ಲಿ ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಂಡಿದ್ದಾರೆ.

Ad
Ad
Nk Channel Final 21 09 2023
Ad