‘ಕನ್ನಡತಿ’ ಸೀರಿಯಲ್ ನಟ ಕಿರಣ್ ರಾಜ್‌ಗೆ ಕಾರು ಅಪಘಾತವಾದ ಬೆನ್ನಲ್ಲೇ ಸೂಕ್ತ ಚಿಕಿತ್ಸೆ ನೀಡಲಾಗಿದ್ದು, ಅವಘಡದ ಬಗ್ಗೆ ನಟ ರಿಯಾಕ್ಟ್ ಮಾಡಿದ್ದಾರೆ. ನಾನು ಈಗ ಆರೋಗ್ಯವಾಗಿದ್ದೇನೆ ಚಿಂತಿಸಬೇಡಿ ಎಂದು ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.
ಆರೋಗ್ಯವಾಗಿರೋದಾಗಿ ವಿಡಿಯೋ ಮಾಡಿದ್ದಾರೆ. ‘ಎಲ್ಲರಿಗೂ ನಮಸ್ಕಾರ. ಏನು ಆಗಿದೆ ಎನ್ನುವ ಬಗ್ಗೆ ಮಾಹಿತಿ ತಲುಪಿದೆ ಎಂದುಕೊಳ್ಳುತ್ತೇನೆ. ಆತಂಕಗೊಂಡು ಅನೇಕರು ಮೆಸೇಜ್ ಮಾಡಿದ್ದೀರಿ. ನಾನು ಆರಾಮಿಗಿದ್ದೇನೆ. ಸ್ವಲ್ಪ ಏಟಾಗಿತ್ತು. ಡಾಕ್ಟರ್ ಚಿಕಿತ್ಸೆ ನೀಡಿದ್ದಾರೆ. ನಾನು ಆರೋಗ್ಯವಾಗಿದ್ದೇನೆ’ ಎಂದು ವಿಡಿಯೋದಲ್ಲಿ ಅವರು ಹೇಳಿದ್ದಾರೆ.
Ad