ಕೊಚ್ಚಿ: ಮಲಯಾಳಂ ಚಿತ್ರನಟ ಇನ್ನಸೆಂಟ್‌ ಇನ್ನಿಲ್ಲ

ಕೊಚ್ಚಿ: ಮಲಯಾಳಂ ಚಿತ್ರರಂಗದ ಅತ್ಯಂತ ಜನಪ್ರಿಯ ನಟರಲ್ಲಿ ಒಬ್ಬರಾದ ಇನ್ನಸೆಂಟ್‌ ಅವರು ಭಾನುವಾರ ರಾತ್ರಿ ಕೇರಳದಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಅವರನ್ನು ಮಾರ್ಚ್ 3 ರಂದು ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಎರಡು ಬಾರಿ ಸಂಸದರಾಗಿದ್ದ ಅವರು ಕ್ಯಾನ್ಸರ್ ವಿರುದ್ಧ ಹೋರಾಡಿ ಬದುಕುಳಿದಿದ್ದರು. ಬಳಿಕ ಕೋವಿಡ್‌ಗೆ ತುತ್ತಾಗಿದ್ದರು. ನಂತರ ನ್ಯುಮೋನಿಯಾದಿಂದ ಬಳಲುತ್ತಿದ್ದರು. ನ್ಯುಮೋನಿಯಾ ಕಾಯಿಲೆಯೇ ಅವರ ಸಾವಿಗೆ ಕಾರಣವಾಯಿತು. ಅವರ ಪಾರ್ಥಿವ ಶರೀರವನ್ನು ಸೋಮವಾರ ಬೆಳಗ್ಗೆ 6.30ಕ್ಕೆ ಎರ್ನಾಕುಲಂನ ರಾಜೀವ್ ಗಾಂಧಿ ಒಳಾಂಗಣ ಕ್ರೀಡಾಂಗಣಕ್ಕೆ ಕೊಂಡೊಯ್ಯಲಾಗುವುದು. ಮೂರು ಗಂಟೆಗಳ ಕಾಲ ಅಲ್ಲಿಯೇ ಪಾರ್ಥಿವ ಶರೀರ ಇರಿಸಲಾಗುವುದು. ಕ್ರೀಡಾಂಗಣದಿಂದ ಅವರ ಪಾರ್ಥಿವ ಶರೀರವನ್ನು ಹುಟ್ಟೂರು ಇರಿಂಗಲಕ್ಕುಡಕ್ಕೆ ಕೊಂಡೊಯ್ಯಲಿದ್ದು, ಸಂಜೆ ಅಂತ್ಯಕ್ರಿಯೆ ನಡೆಯಲಿದೆ. ಸುಮಾರು 700 ಚಲನಚಿತ್ರಗಳಲ್ಲಿ ನಟಿಸಿದ ಅವರು ಹಿರಿಯ ಹಾಸ್ಯನಟನಾಗಿದ್ದರು. 2014 ರಲ್ಲಿ ಚಾಲಕುಡಿ ಲೋಕಸಭಾ ಕ್ಷೇತ್ರದಿಂದ ಸಿಪಿಐ-ಎಂ ಅಭ್ಯರ್ಥಿಯಾಗಿ ಗೆದ್ದಿದ್ದರು.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತಮ್ಮ ಸಂತಾಪ ಸಂದೇಶದಲ್ಲಿ ಇನ್ನಸೆಂಟ್‌ ತಮ್ಮ ಸಹಜ ನಟನೆಯ ಮೂಲಕ ಜನರ ಹೃದಯ ಗೆದ್ದಿದ್ದರು. ಉತ್ತಮ ಸಮಾಜ ಸೇವಕರೂ ಆಗಿದ್ದರು ಎಂದು ತಿಳಿಸಿದ್ದಾರೆ. ಇನ್ನಸೆಂಟ್‌ ಮಲಯಾಳಂನ ಜನಪ್ರಿಯ ಪುಸ್ತಕ, ‘ಕ್ಯಾನ್ಸರ್ ವಾರ್ಡಿಲ್ ಚಿರಿ’ ಅಥವಾ ‘ಸ್ಮೈಲ್ ಇನ್ ಕ್ಯಾನ್ಸರ್ ವಾರ್ಡ್’ ಅನ್ನು ಬರೆದಿದ್ದಾರೆ. ಮಲಯಾಳಂನ ಅತ್ಯಂತ ಜನಪ್ರಿಯ ನಿರ್ದೇಶಕರಲ್ಲಿ ಒಬ್ಬರಾದ ಮೋಹನ್ ನಿರ್ದೇಶನದ ‘ನೃತಸಲಾ’ ಚಿತ್ರದ ಮೂಲಕ ಇನ್ನಸೆಂಟ್‌ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿದ್ದರು.

Ashika S

Recent Posts

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ ಮೂರು ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

13 seconds ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

15 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

30 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

34 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

57 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago