ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಅಭಿನಯದ ಬಹುನೀರಿಕ್ಷಿತ ʼಕೋಟಿʼ ಸಿನಿಮಾ ಇಂದು ರಿಲೀಸ್ ಆಗುತ್ತಿದೆ.
ಈ ಚಿತ್ರದ ಬರಹಗಾರ, ನಿರ್ದೇಶಕ ಪರಮ್ ಕಿರುತೆರೆಯಲ್ಲಿ ಬಹುದೊಡ್ಡ ಹೆಸರು ಹೊಂದಿದ್ದಾರೆ. ಇತ್ತೀಚೆಗೆಷ್ಟೇ ಕೋಟಿ ಸಿನಿಮಾದ ಪ್ರೀ ರಿಲೀಸ್ ಅದ್ಧೂರಿಯಾಗಿ ನಡೆದಿತ್ತು. ಈ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಆಗಮಿಸಿ ಸುಮಾರು ಒಂದು ಗಂಟೆಗಳಿಗೂ ಅಧಿಕ ಸಮಯ ವೇದಿಕೆಯ ಮೇಲಿದ್ದು ತಂಡಕ್ಕೆ ಶುಭ ಹಾರೈಸಿದರು.
ಇದೇ ವೇದಿಕೆಯಲ್ಲಿ ಚಿತ್ರತಂಡ ಅಭಿನಯ ಚಕ್ರವರ್ತಿ ಸುದೀಪ್ ಅವರಿಗೆ ಕೋಟಿಯ ಮೊದಲ ಟಿಕೆಟ್ ನೀಡಿತು. ಇನ್ನು ಹತ್ತಾರು ವರ್ಷ ಟೀವಿ, ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿರುವ ಪರಮ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.
ಇಂದು ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕೋಟಿ ಸಿನಿಮಾ ಬಿಡುಗಡೆಯಾಗಲಿದೆ. ನಂತರದ ದಿನಗಳಲ್ಲಿ ಅಮೇರಿಕಾ, ಇಂಗ್ಲೆಂಡ್, ಯುರೋಪ್ ಮತ್ತು ಗಲ್ಫ್ ದೇಶಗಳಲ್ಲೂ ಬಿಡುಗಡೆಯಾಗಲಿದೆ.
ಈ ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ಮ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್ ಭಟ್ ಮತ್ತು ವಾಸುಕಿ ವೈಭವ್ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್ ಪೌಲ್ ಹೊತ್ತಿದ್ದಾರೆ.

