Bengaluru 22°C
Ad

ಡಾಲಿ ಧನಂಜಯ್ ನಟನೆಯ ಬಹುನೀರಿಕ್ಷಿತ ʼಕೋಟಿʼ ಸಿನಿಮಾ ಇಂದು ರಿಲೀಸ್

ಸ್ಯಾಂಡಲ್​​ವುಡ್​​ ನಟ ಡಾಲಿ ಧನಂಜಯ್ ಅಭಿನಯದ ಬಹುನೀರಿಕ್ಷಿತ ʼಕೋಟಿʼ ಸಿನಿಮಾ ಇಂದು ರಿಲೀಸ್​ ಆಗುತ್ತಿದೆ. 

ಸ್ಯಾಂಡಲ್​​ವುಡ್​​ ನಟ ಡಾಲಿ ಧನಂಜಯ್ ಅಭಿನಯದ ಬಹುನೀರಿಕ್ಷಿತ ʼಕೋಟಿʼ ಸಿನಿಮಾ ಇಂದು ರಿಲೀಸ್​ ಆಗುತ್ತಿದೆ.

Ad
300x250 2

ಈ ಚಿತ್ರದ ಬರಹಗಾರ, ನಿರ್ದೇಶಕ ಪರಮ್ ಕಿರುತೆರೆಯಲ್ಲಿ ಬಹುದೊಡ್ಡ ಹೆಸರು ಹೊಂದಿದ್ದಾರೆ. ಇತ್ತೀಚೆಗೆಷ್ಟೇ ಕೋಟಿ ಸಿನಿಮಾದ ಪ್ರೀ ರಿಲೀಸ್ ಅದ್ಧೂರಿಯಾಗಿ ನಡೆದಿತ್ತು. ಈ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಆಗಮಿಸಿ ಸುಮಾರು ಒಂದು ಗಂಟೆಗಳಿಗೂ ಅಧಿಕ ಸಮಯ ವೇದಿಕೆಯ ಮೇಲಿದ್ದು‌ ತಂಡಕ್ಕೆ ಶುಭ ಹಾರೈಸಿದರು.

ಇದೇ ವೇದಿಕೆಯಲ್ಲಿ ಚಿತ್ರತಂಡ ಅಭಿನಯ ಚಕ್ರವರ್ತಿ ಸುದೀಪ್ ಅವರಿಗೆ ಕೋಟಿಯ ಮೊದಲ ಟಿಕೆಟ್​ ನೀಡಿತು. ಇನ್ನು ಹತ್ತಾರು ವರ್ಷ ಟೀವಿ, ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿರುವ ಪರಮ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಇಂದು ರಾಜ್ಯಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕೋಟಿ ಸಿನಿಮಾ ಬಿಡುಗಡೆಯಾಗಲಿದೆ. ನಂತರದ ದಿನಗಳಲ್ಲಿ ಅಮೇರಿಕಾ, ಇಂಗ್ಲೆಂಡ್, ಯುರೋಪ್ ಮತ್ತು ಗಲ್ಫ್ ದೇಶಗಳಲ್ಲೂ ಬಿಡುಗಡೆಯಾಗಲಿದೆ.

ಈ ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ಮ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ.

 

Ad
Ad
Nk Channel Final 21 09 2023
Ad