News Karnataka Kannada
Friday, May 17 2024
ಮನರಂಜನೆ

ಮೇರುನಟಿ ಲೀಲಾವತಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಹಾಗು ದಕ್ಷಿಣ ಭಾರತದ ಹಿರಿಯ ನಟಿ ಲೀಲಾವತಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ
Photo Credit : News Kannada

ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಹಾಗು ದಕ್ಷಿಣ ಭಾರತದ ಹಿರಿಯ ನಟಿ ಲೀಲಾವತಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ.

“ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ” ಎಂದು ಅವರು ಬರೆದುಕೊಂಡಿದ್ದಾರೆ.

ಇಂದು(ಡಿ.8) ಮಧ್ಯಾಹ್ನದ ವೇಳೆಗೆ ನಟಿ ಲೀಲಾವತಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಅದಾಗಲೇ ತೀವ್ರ ನಿಶ್ಯಕ್ತರಾಗಿದ್ದ ಲೀಲಾವತಿ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಅದರೊಂದಿಗೆ ಕನ್ನಡ ಚಿತ್ರರಂಗದ ದೊಡ್ಡ ಕೊಂಡಿಕಯೊಂದು ಕಳಚಿ ಬಿದ್ದಂತಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು