Bengaluru 22°C
Ad

ರೇಣುಕಾಸ್ವಾಮಿ ಕೊಲೆ ಪ್ರಕರಣ : ಸಾರ್ವಜನಿಕ ವ್ಯಕ್ತಿಯ ವಿಚಾರ, ಸಾರ್ವಜನಿಕವಾಗಿಯೇ ನಡೆಯಲಿ: ಉಪೇಂದ್ರ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್  ಅರೆಸ್ಟ್ ಆಗಿದ್ದಾರೆ. ಸುದೀಪ್ ಬೆನ್ನಲ್ಲೇ ದರ್ಶನ್ ಪ್ರಕರಣದ ಬಗ್ಗೆ ಉಪೇಂದ್ರ ಪ್ರತಿಕ್ರಿಯಿಸಿದ್ದು, ಸಾರ್ವಜನಿಕ ವ್ಯಕ್ತಿಯ ವಿಚಾರ, ಸಾರ್ವಜನಿಕವಾಗಿಯೇ ನಡೆಯಲಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಹೇಳಿದ್ದಾರೆ. 

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್  ಅರೆಸ್ಟ್ ಆಗಿದ್ದಾರೆ. ಸುದೀಪ್ ಬೆನ್ನಲ್ಲೇ ದರ್ಶನ್ ಪ್ರಕರಣದ ಬಗ್ಗೆ ಉಪೇಂದ್ರ ಪ್ರತಿಕ್ರಿಯಿಸಿದ್ದು, ಸಾರ್ವಜನಿಕ ವ್ಯಕ್ತಿಯ ವಿಚಾರ, ಸಾರ್ವಜನಿಕವಾಗಿಯೇ ನಡೆಯಲಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ.

ಯಾವುದೇ ಕೇಸ್ ಆದರೂ ಆ ಕೇಸ್‌ನ ವಿಚಾರಣೆಯ ವಿಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೊಲೀಸರು ಸಂಬಂಧ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು ಎಂದು ಬರೆದುಕೊಂಡಿದ್ದಾರೆ.

ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್‌ನ ವಿಚಾರಣೆಯ ವಿಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೊಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ  ಎಂದರು ಉಪೇಂದ್ರ.

ಆಗ ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟಿವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೇ ಪೊಲೀಸ್ ಮತ್ತು ಟಿವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ. ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ ಎಂದು ಬರೆದುಕೊಂಡಿದ್ದಾರೆ.

Ad
Ad
Nk Channel Final 21 09 2023
Ad