ಡಾರ್ಲಿಂಗ್ ಕೃಷ್ಣ ನಿರ್ದೇಶನ ಮಾಡಿ ನಟಿಸಿರುವ ಚಿತ್ರ ಲವ್ ಮಾಕ್ಟೇಲ್ 3 ಮಾರ್ಚ್ 19ರಂದು ಬಿಡುಗಡೆಗೊಳ್ಳಲಿರುವ ಈ ಚಿತ್ರದ ಟ್ರೈಲರ್ ಇದೀಗ ಬಿಡುಗಡೆಗೊಂಡಿದೆ.
ಲವ್ ಮಾಕ್ಟೇಲ್ ಮೊದಲ ಆವೃತ್ತಿಯ ಟ್ರೈಲರ್ ಅನ್ನು ಕಿಚ್ಚಾ ಸುದೀಪ್ ಬಿಡುಗಡೆಗೊಳಿಸಿದ್ದರು. ಎರಡನೇ ಆವೃತ್ತಿಯ ಟ್ರೈಲರ್ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಕಡೆಯಿಂದ ಬಿಡುಗಡೆಗೊಂಡಿತ್ತು. ಆದರೆ ಮೂರನೇ ಆವೃತ್ತಿಯ ಈ ಟ್ರೈಲರ್ ಅನ್ನು ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಪುತ್ರಿ ಪರಿ ಬಿಡುಗಡೆಗೊಳಿಸಿದ್ದಾರೆ.
ಈ ಟ್ರೈಲರ್ ಬಿಡುಗಡೆಯ ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ಹಾಗೂ ಈ ಚಿತ್ರಕ್ಕೊಂದು ಹಾಡನ್ನು ಬರೆದಿರುವ ಶಶಾಂಕ್ ಮತ್ತು ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆಯ ಸುಪ್ರೀತ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಮಿಲನಾ ನಾಗರಾಜ್, ಡಾರ್ಲಿಂಗ್ ಕೃಷ್ಣ, ದಿಲೀಪ್ ರಾಜ್, ಶ್ವೇತಾ ಪ್ರಸಾದ್, ಅಮೃತಾ ಅಯ್ಯಂಗಾರ್, ಗೀತರಚನೆಕಾರ ರಾಘವೇಂದ್ರ ಕಾಮತ್, ನಟ ಜಗದೀಶ್, ರೆಚೆಲ್ ಡೇವಿಡ್, ಶ್ರೀ ಕ್ರೇಜಿ ಮೈಂಡ್ಸ್, ಸಂವೃತ, ಅಭಿಲಾಶ್, ರಜನಿ, ನಯಾರಾ ಮುಂತಾದವರು ಉಪಸ್ಥಿತರಿದ್ದರು.

