ಲಕ್ನೋ: ಬಾಲಿವುಡ್ ನಟ ಶಾರುಖ್ ಖಾನ್ ಪತ್ನಿ ಗೌರಿ ಖಾನ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಗೌರಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 409 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಗೌರಿ ಬ್ರಾಂಡ್ ಅಂಬಾಸಿಡರ್ ಆಗಿರುವ ಕಂಪನಿಯು 86 ಲಕ್ಷ ರೂ.ಗಳನ್ನುಪಡೆದುಕೊಂಡಿದ್ದರೂ ವಸತಿ ಗೃಹವನ್ನು ಹಸ್ತಾಂತರಿಸಿಲ್ಲ ಎಂದು ಆರೋಪಿಸಿ ಮುಂಬೈ ನಿವಾಸಿ ಜಸ್ವಂತ್ ಶಾ ದೂರು ದಾಖಲಿಸಿದ್ದಾರೆ.
ಲಕ್ನೋದ ಸುಶಾಂತ್ ಗಾಲ್ಫ್ ಸಿಟಿ ಪ್ರದೇಶದ ತುಳಸಿಯಾನಿ ಗಾಲ್ಫ್ ವ್ಯೂನಲ್ಲಿರುವ ಅದೇ ಫ್ಲ್ಯಾಟ್ ಅನ್ನು ಬೇರೊಬ್ಬರಿಗೆ ನೀಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.
ಗೌರಿ ಅವರಲ್ಲದೆ, ತುಳಸಿಯಾನಿ ಕನ್ಸ್ಟ್ರಕ್ಷನ್ ಅಂಡ್ ಡೆವಲಪ್ಮೆಂಟ್ ಲಿಮಿಟೆಡ್ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಅನಿಲ್ ಕುಮಾರ್ ತುಳಸಿಯಾನಿ ಮತ್ತು ಅದರ ನಿರ್ದೇಶಕ ಮಹೇಶ್ ತುಳಸಿಯಾನಿ ವಿರುದ್ಧವೂ ದೂರು ದಾಖಲಿಸಲಾಗಿದೆ.
ಕಂಪನಿಯ ಬ್ರಾಂಡ್ ಅಂಬಾಸಿಡರ್ ಗೌರಿ ಖಾನ್ ಅವರ ಮಾತಿಗೆ ಮರುಳಾಗಿ ಫ್ಲಾಟ್ ಖರೀದಿಸಿದ್ದೇನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.