ಸೂಪರ್ ಹಿಟ್ ಸಿನಿಮಾ ʻಜೈಲರ್ʼನಲ್ಲಿ ರಜನಿಕಾಂತ್ ಎದುರು ವಿಲನ್ ಆಗಿ ಅಬ್ಬರಿಸಿದ್ದ ಮಲಯಾಳಂ ನಟ ವಿನಾಯಕನ್ ಅವರನ್ನು ಅರೆಸ್ಟ್ ಮಾಡಲಾಗಿದೆ.
ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂಠಪೂರ್ತಿ ಕುಡಿದಿದ್ದ ವಿನಾಯಕನ್, ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.
ವಿನಾಯಕನ್ ಅವರು ಕೊಚ್ಚಿಯಿಂದ ಹೈದರಾಬಾದ್‌ನ ರಾಜೀವ್ ಗಾಂಧಿ ಇಂಟರ್‌ನ್ಯಾಷನಲ್ ಏರ್‌ಪೋರ್ಟ್‌ಗೆ ಆಗಮಿಸಿದ್ದರು. ಅಲ್ಲಿ ಇಂಡಿಗೋ ಸಿಬ್ಬಂದಿ ಜೊತೆಗೆ ಮೊದಲು ಅನುಚಿತವಾಗಿ ವರ್ತಿಸಿದ್ದಾರೆ. ಅವರು ವಿಪರೀತ ಕುಡಿದಿದ್ದರಿಂದ ಮೈಮೇಲೆ ಅರಿವೇ ಇಲ್ಲದಂತೆ ನಡೆದುಕೊಂಡಿದ್ದಾರೆ.
ಅಲ್ಲಿನ ಸಿಬ್ಬಂದಿಗೆ ಅವರನ್ನು ನಿಯಂತ್ರಿಸುವುದು ಕಷ್ಟವಾಗಿದೆ. ಅಲ್ಲದೇ ಪ್ರಯಾಣಿಕರೊಂದಿಗೂ ಅಸಭ್ಯವಾಗಿ ವರ್ತಿಸಿದ್ದಾರೆ. ಈ ಬಗ್ಗೆ ದೂರು ನೀಡಿದ ಬಳಿಕ ಏರ್‌ಪೋರ್ಟ್ ಸಿಐಎಸ್‌ಎಫ್ ಭದ್ರತಾ ಸಿಬ್ಬಂದಿ ವಿನಾಯಕನ್ ಅವರನ್ನು ವಶಕ್ಕೆ ಪಡೆದು, ಸ್ಥಳೀಯ ಏರ್‌ಪೋರ್ಟ್ ಪೊಲೀಸರಿಗೆ ಒಪ್ಪಿಸಿದ್ದಾರೆ.
Ad