News Karnataka Kannada
Tuesday, April 30 2024
ಮಲಯಾಳಂ

ಬಾಡಿಗೆ ತಾಯಿ ಮೂಲಕ ಮಗುವಿಗೆ ಜನ್ಮ ನೀಡಲಿದ್ದಾರೆ ನಟಿ ನಯನತಾರಾ

Nayana Thara
Photo Credit :

ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್ ನಯನತಾರಾ. ವಿಶ್ವದ ಮೂಲೆ ಮೂಲೆಯಲ್ಲೂ ನಯನತಾರಾಗೆ ಅಸಂಖ್ಯಾತ ಅಭಿಮಾನಿಗಳು ಇದ್ದಾರೆ. 37 ವರ್ಷ ಈ ನಟಿ ಯಶಸ್ಸಿನ ತುತ್ತ ತುದಿಯಲ್ಲಿದ್ದಾರೆ. ಅದಕ್ಕೆ ದಕ್ಷಿಣ ಭಾರತದ ಚಿತ್ರರಂಗ ಈಕೆಯನ್ನು ಲೇಡಿ ಸೂಪರ್‌ಸ್ಟಾರ್ ಎಂದು ಬಿರುದನ್ನೇ ನೀಡಿದೆ.

ಇಷ್ಟೇ ಅಲ್ಲ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಕೆಲವೇ ಕೆಲವು ನಟಿಯರಲ್ಲಿ ನಯನತಾರಾ ಕೂಡ ಒಬ್ಬರು. ನಯನತಾರ ಮೊದಲ ಹೆಸರು ಡಯಾನಾ ಮರಿಯಮ್ ಕುರಿಯನ್. ಒಂದು ಸಾಮಾನ್ಯ ಕುಟುಂಬದಿಂದ ಬಂದ ಸಾಮಾನ್ಯ ಹುಡುಗಿ ದಕ್ಷಿಣ ಭಾರತದ ಸೂಪರ್‌ಸ್ಟಾರ್ ಪಟ್ಟಕ್ಕೇರುವುದೆಂದರೆ ಅದು ಕಡಿಮೆ ಸಾಧನೆಯೆನಲ್ಲಾ. ಆದರೆ, ಸಿನಿಮಾದಲ್ಲಿ ಕಂಡ ಯಶಸ್ಸು ವೈಯಕ್ತಿಕ ಜೀವನದಲ್ಲಿ ಕಂಡಿಲ್ಲ. ನಯನತಾರಾ ಸಿನಿಮಾಗಳು ಸದ್ದು ಮಾಡಿದಂತೆ, ಅವರ ವೈಯಕ್ತಿಕ ಜೀವನ ಕೂಡ ಸದ್ದು ಮಾಡುತ್ತಲೇ ಇರುತ್ತೆ.

ಪ್ರೀತಿಯ ವಿಚಾರದಲ್ಲಿ ನಿರಂತರ ಸೋಲುಂಡ ಬಳಿಕ ನಯನತಾರಾ ನಿರ್ದೇಶಕ ವಿಘ್ನೇಶ್ ಶಿವನ್ ಪ್ರೀತಿಯಲ್ಲಿ ಬಿದ್ದಿದ್ದಾರೆ. ಕಳೆದ ಆರು ವರ್ಷಗಳಿಂದ ನಯನತಾರಾ ಹಾಗೂ ವಿಘ್ನೇಶ್ ಡೇಟಿಂಗ್ ಮಾಡುತ್ತಿದ್ದಾರೆ. ಈಗ ಇವರಿಬ್ಬರ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ. ನಯನತಾರಾ ಹಾಗೂ ವಿಘ್ನೇಶ್ ಶಿವನ್ ಇಬ್ಬರೂ ಬಾಡಿಗೆ ತಾಯಿ ಮೂಲಕ ಮಗು ಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇದೀಗ ನಯನತಾರಾ ಹಾಗೂ ವಿಘ್ನೇಶ್ ಬಗ್ಗೆ ಬಿಸಿ ಬಿಸಿ ಸುದ್ದಿಯೊಂದು ಹರಿದಾಡುತ್ತಿದೆ. ಈ ಜೋಡಿ ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯಲು ನಿರ್ಧರಿಸಿದ್ದಾರೆ. ವಿವಾಹದ ಬಳಿಕವೇ ಮಗು ಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಮತ್ತು ಪತಿ ನಿಕ್ ಜೋನಾಸ್ ಕೂಡ ಬಾಡಿಗೆ ತಾಯ್ತನದ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದೇ ಹಾದಿಯಲ್ಲಿ ನಯನತಾರಾ ಮತ್ತು ವಿಘ್ನೇಶ್ ಸಾಗಲಿದ್ದಾರೆ ಎಂದು ವರದಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು