ಮಲಯಾಳಂ ಚಿತ್ರರಂಗದ ಎವರ್ ಗ್ರೀನ್ ಹೀರೋ ಮೋಹನ್ ಲಾಲ್ ತಮ್ಮ ನಾಲ್ಕು ದಶಕಗಳ ಸಿನಿಮಾರಂಗದ ವೃತ್ತಿ ಜೀವನದಲ್ಲಿ 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದು, ಇಂದು (ಮೇ 21) 62 ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
ಮಾಲಿವುಡ್ ನಲ್ಲಿ ಲಾಲೆಟ್ಟನ್ ಎಂದೇ ಜನಪ್ರಿಯರಾಗಿರುವ ಮೋಹನ್ ಲಾಲ್ ತಮ್ಮ ವೈವಿಧ್ಯಮಯ ಪಾತ್ರಗಳ ಅಭಿನಯದ ಮೂಲಕ ಭಾರತ ಸೇರಿದಂತೆ ಜಗತ್ತಿನಾದ್ಯಂತ ದೊಡ್ಡ ಅಭಿಮಾನಿಗಳ ಬಳಗವನ್ನು ಹೊಂದಿದ್ದಾರೆ.
ಮಲಯಾಳಂ ಚಿತ್ರರಂಗದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ನಟ ಮೋಹನ್ ಲಾಲ್.