ತಿರುವನಂತಪುರ: ಮಲಯಾಳಂ ನಟ ಶ್ರೀಜಿತ್ ರವಿ ಸಾರ್ವಜನಿಕವಾಗಿ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಆರೋಪದ ಮೇಲೆ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಜುಲೈ 4 ರಂದು ತ್ರಿಶೂರ್ನ ಅಯ್ಯಂತೋಲ್ನ ಎಸ್ಎನ್ ಪಾರ್ಕ್ನಲ್ಲಿ 9 ಮತ್ತು 14 ವರ್ಷ ವಯಸ್ಸಿನ ಇಬ್ಬರು ಅಪ್ರಾಪ್ತ ಬಾಲಕಿಯರ ಮುಂದೆ ರವಿ ಅಶ್ಲೀಲವಾಗಿ ವರ್ತಿಸಿದ್ದಾರೆ ಎಂದು ದೂರು ದಾಖಲಾಗಿತ್ತು.
ಈ ಬಗ್ಗೆ ಸಿಸಿ ಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಸಿದ ತ್ರಿಶೂರ್ ಪಶ್ಚಿಮ ಪೊಲೀಸರು ಪೋಕ್ಸೋ ಕಾಯ್ದೆಯಡಿ ಅವರನ್ನು ಬಂಧಿಸಿದ್ದಾರೆ.
ನಟ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಗುರಿಯಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ 2016ರಲ್ಲಿ ಇಂತಹದ್ದೇ ಪ್ರಕರಣದಲ್ಲಿ ಒಟ್ಟಪ್ಪಲಂ ಪೊಲೀಸರು ರವಿಯನ್ನು ಬಂಧಿಸಿದ್ದರು. ಬಿಡುಗಡೆ ಬಳಿಕ ಶ್ರೀಜಿತ್ ರವಿ ಹಲವಾರು ಮಲಯಾಳಂ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು.
Thrissur, Kerala | Police arrest Malayalam actor Sreejith Ravi for alleged indecent conduct towards 2 minor girls in public, on July 4. Case registered under POCSO Act: Thrissur West Police
— ANI (@ANI) July 7, 2022