ಮಂಗಳೂರು: ಆ.18ರ ಕೃಷ್ಣ ಜನ್ಮಾಷ್ಟಮಿಯಂದು ತೆರೆ ಕಾಣಲಿದೆ ಅಬತರ ಸಿನಿಮಾ

ಮಂಗಳೂರು: ಕೋವಿಡ್ ಸಮಯದಲ್ಲಿ ರೂಪುಗೊಂಡ ಸಿನಿಮಾ ಅಬತರ ಆ.18ರ ಕೃಷ್ಣ ಜನ್ಮಾಷ್ಟಮಿಯಂದು ತೆರೆ ಕಾಣಲಿದೆ. ಹಲವಾರು ವಿಶೇಷತೆಗಳನ್ನು ಒಳಗೊಂಡ ಈ ಸಿನಿಮಾವನ್ನು ಖ್ಯಾತ ರಂಗ ನಿರ್ದೇಶಕ ದೇವದಾಸ್ ಕಾಪಿಕಾಡ್ ಹಾಗೂ ಅವರ ಪುತ್ರ ಅರ್ಜುನ್ ಕಾಪಿಕಾಡ್ ಕೋವಿಡ್ ಕಾಲದಲ್ಲಿ ರೂಪಿಸಿದ್ದು, ಇದೀಗ ರಿಲೀಸ್ ಆಗಲಿದೆ‌.

ಈ ಸಿನಿಮಾದಲ್ಲಿ ನಾಯಕ ನಟನಾಗಿ ಅರ್ಜುನ್ ಕಾಪಿಕಾಡ್ ಅವರು ಅಭಿನಯಿಸುವುದರೊಂದಿಗೆ ಮೊದಲ ಬಾರಿಗೆ ಅವರು ಆ್ಯಕ್ಷನ್ ಕಟ್ ಹೇಳಲಿದ್ದಾರೆ‌. ವಿಶೇಷವೆಂದರೆ ಸಿನಿಮಾದ ರಿಲೀಸ್ ಆಗೋದಕ್ಕಿಂತ ಮೊದಲೇ ಮಂಗಳೂರು, ಮೂಡುಬಿದಿರೆ, ಪುತ್ತೂರು, ಉಡುಪಿ, ಪಡುಬಿದ್ರೆ, ಕಿನ್ನಿಗೋಳಿ, ಗುರುಪುರ, ಕುಲಶೇಖರ ಮೊದಲಾಡೆ ಇರುವ ಅನಾಥಾಶ್ರಮದ ಮಕ್ಕಳಿಗೆ ಸಿನಿಮಾ ತೊರಿಸುವ ಕೆಲಸವನ್ನು ಚಿತ್ರತಂಡ ವ್ಯವಸ್ಥೆ ಮಾಡಿದೆ. ಆ.16 ಹಾಗೂ 17ರಂದು 800ಕ್ಕೂ ಅಧಿಕ ಮಕ್ಕಳು ಕೆಎಸ್ಆರ್ ಟಿಸಿ ಬಳಿಯಿರುವ ಆ್ಯಡ್ ಲ್ಯಾಬ್ ಚಿತ್ರಮಂದಿರದಲ್ಲಿ ಈ ಸಿನಿಮಾ ವೀಕ್ಷಿಸಲಿದ್ದಾರೆ.

ಸಂಪೂರ್ಣ ಹಾಸ್ಯಮಯ ಕಥಾಹಂದರವುಳ್ಳ ಈ‌‌ ಸಿನಿಮಾಕ್ಕೆ ದೇವದಾಸ್ ಕಾಪಿಕಾಡ್ ಅವರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಬೊಳ್ಳಿ ಮೂವೀಸ್ ಲಾಂಛನದಡಿಯಲ್ಲಿ ಮೂಡಿ ಬಂದ ಅಬತರ ಸಿನಿಮಾದ ನಟಿ ಗಾನಾ ಭಟ್ ಮೊದಲ ಬಾರಿಗೆ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಖ್ಯಾತ ಹಿನ್ನೆಲೆ ಗಾಯಕ ನಕುಲ್ ಅಭ್ಯಂಕರ್ ಈ ಸಿನಿಮಾಗೆ ಮೊದಲ ಬಾರಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ವಿಶೇಷವೆಂದರೆ ಪದವಿ ವಿದ್ಯಾರ್ಥಿ ನಿಖಿಲ್ ಸಾಲ್ಯಾನ್ ನಿರ್ಮಾಪಕರಾಗಿದ್ದು ಹಾಗೂ ವೀರಾಜ್ ಅತ್ತಾವರ ಸಹ ನಿರ್ಮಾಪಕರಾಗಿದ್ದಾರೆ.

Sneha Gowda

Recent Posts

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

10 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

33 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

60 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

1 hour ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

1 hour ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

1 hour ago