ಮಂಗಳೂರು: ಕಲಾ ಸಾಧನಾ ಮ್ಯೂಸಿಕ್ ಸ್ಕೂಲ್, ಮಂಗಳೂರು ನಾರ್ತ್ ಇನ್ನರ್ ವ್ಹೀಲ್ ಕ್ಲಬ್ ಮತ್ತು ದೇವಿಕಾ ಯೋಗ ಕ್ಲಾಸ್ ಮಂಗಳೂರು ಇದರ ಸಹಯೋಗದಲ್ಲಿ ನಗರದ ಲಾಲ್ ಭಾಗ್ ಬಳಿ ಇರುವ ಇಂದಿರಾ ಪ್ರಿಯದರ್ಶಿನಿ ವನಿತಾ ಪಾರ್ಕ್ ನಲ್ಲಿ ಸಂಗೀತ ಸಂಭ್ರಮ ಕಾರ್ಯಕ್ರಮ ನ.6ರಂದು ಭಾನುವಾರ ಬೆಳಿಗ್ಗೆ 7ರಿಂದ 9ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.
ಸಂಗೀತ ಕಾರ್ಯಕ್ರಮವನ್ನು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಉದ್ಘಾಟಿಸಲಿದ್ದಾರೆ.
ವಿಭಾ ನಿವಾಸನಾಯಕ್ ಮತ್ತು ತಂಡದವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.