Ad

ಅನಂತ್-ರಾಧಿಕಾ ಮದುವೆಗೂ ಮುನ್ನ 50 ಜೋಡಿಗಳ ಸಾಮೂಹಿಕ ವಿವಾಹ

ಭಾರತದ ಶ್ರೀಮಂತ ಉದ್ಯಮಿ ಮುಖೇಶ್​ ಅಂಬಾನಿ ಮಗ ಅನಂತ್​ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಪ್ರೀ ವೆಡ್ಡಿಂಗ್‌ ಕಾರ್ಯಕ್ರಮಗಳು ಭರ್ಜರಿಯಾಗಿ ಜರುಗಿವೆ ಇನ್ನೇನು ಮದುವೆ ಕಾರ್ಯಕ್ಕೂ ಕೇವಲ 12 ದಿನಗಳು ಬಾಕಿ ಉಳಿದಿವೆ. ಈ ನಡುವೆ 50 ಜೋಡಿಗಳ ಸಾಮೂಹಿಕ ವಿವಾಹವನ್ನು ಮಾಡಿಸಿ ಶುಭ ಹಾರೈಸಿದ್ದಾರೆ ಅಂಬಾನಿ ಕುಟುಂಬ.

ಮುಂಬೈ: ಭಾರತದ ಶ್ರೀಮಂತ ಉದ್ಯಮಿ ಮುಖೇಶ್​ ಅಂಬಾನಿ ಮಗ ಅನಂತ್​ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಪ್ರೀ ವೆಡ್ಡಿಂಗ್‌ ಕಾರ್ಯಕ್ರಮಗಳು ಭರ್ಜರಿಯಾಗಿ ಜರುಗಿವೆ ಇನ್ನೇನು ಮದುವೆ ಕಾರ್ಯಕ್ಕೂ ಕೇವಲ 12 ದಿನಗಳು ಬಾಕಿ ಉಳಿದಿವೆ. ಈ ನಡುವೆ 50 ಜೋಡಿಗಳ ಸಾಮೂಹಿಕ ವಿವಾಹವನ್ನು ಮಾಡಿಸಿ ಶುಭ ಹಾರೈಸಿದ್ದಾರೆ ಅಂಬಾನಿ ಕುಟುಂಬ.

Ad
300x250 2

ಹೌದು, . ಜುಲೈ 12ರಂದು ಅಂಬಾನಿ ಮಗ ಅನಂತ್​ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಅನಂತ್​ ಹಾಗೂ ರಾಧಿಕಾ ಮದುವೆ ಹತ್ತಿರವಾಗುತ್ತಿದ್ದಂತೆ ಅಂಬಾನಿ ಕುಟುಂಬಸ್ಥರು ಸಾಮೂಹಿಕ ವಿವಾಹವನ್ನು ಹಮ್ಮಿಕೊಂಡಿದ್ದರು. ಮುಂಬೈನಿಂದ 100 ಕಿಮೀ ದೂರದಲ್ಲಿರುವ ಪಾಲ್ಟರ್ ಪ್ರದೇಶದಲ್ಲಿನ 50ಕ್ಕೂ ಹೆಚ್ಚು ಜೋಡಿಗಳಿಗೆ ಮದುವೆ ಮಾಡಿಸಿದ್ದಾರೆ.

ಆರ್ಥಿಕವಾಗಿ ಹಿಂದುಳಿದಂಥ ವಧು- ವರರಿಗೆ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ನಡೆಸಲಾಯಿತು. ರಿಲಯನ್ಸ್ ಕಾರ್ಪೊರೇಟ್ ಪಾರ್ಕ್​ನಲ್ಲಿ ನಡೆದ ವಿವಾಹ ಸಮಾರಂಭವದಲ್ಲಿ ನವ ದಂಪತಿಗಳ ಕುಟುಂಬದ ಪರವಾಗಿ ಸುಮಾರು 800 ಜನರು ಭಾಗವಹಿಸಿದ್ದರು.

ಸಾಮೂಹಿಕ ವಿವಾಹ ಸಂದರ್ಭದಲ್ಲಿ ಪ್ರತಿ ಜೋಡಿಗೂ ಮಂಗಳಸೂತ್ರ, ಮದುವೆಯ ಉಂಗುರಗಳು, ಮೂಗುತಿ, ತಾಳಿ ಸೇರಿದಂತೆ ಚಿನ್ನಾಭರಗಳನ್ನು ನೀಡಲಾಯಿತು. ಜೊತೆಗೆ ಕಾಲುಂಗುರ, ಕಾಲೆಜ್ಜೆಯಂಥ ಬೆಳ್ಳಿ ಆಭರಣಗಳನ್ನು ಸಹ ನೀಡಲಾಯಿತು. ಇದರ ಜತೆಗೆ ಪ್ರತಿ ವಧುವಿಗೆ ರೂ. 1.01 ಲಕ್ಷ ರೂಪಾಯಿಯನ್ನು ತವರು ಮನೆಯಿಂದ ನೀಡುವಂಥ ಸ್ತ್ರೀಧನದ ರೂಪದಲ್ಲಿ ಕೊಡಲಾಯಿತು. ಅಲ್ಲದೆ ಪ್ರತಿ ದಂಪತಿಗೂ ಒಂದು ವರ್ಷಕ್ಕೆ ಸಾಕಾಗುವಂಥ ದಿನಸಿ, ಗೃಹೋಪಯೋಗಿ ವಸ್ತುಗಳನ್ನು ಕೊಡಲಾಯಿತು.

ಈ ಹಿಂದೆ ಕೂಡ ಅಂಬಾನಿ ಕುಟುಂಬದಲ್ಲಿ ಮದುವೆ ನಡೆದ ಸಂದರ್ಭದಲ್ಲಿ ವಿವಿಧ ಸಮುದಾಯಗಳ ಜನರಿಗೆ ಮತ್ತು ಎನ್‌ಜಿಒಗಳ ಸಹಕಾರದೊಂದಿಗೆ ಅನ್ನ ದಾನ ಸೇವೆ ಮಾಡುತ್ತಾ ಬರುತ್ತಿದ್ದಾರೆ.

 

Ad
Ad
Nk Channel Final 21 09 2023
Ad