ಮುಂಬೈ: ಬಾಲಿವುಡ್ ಚಿತ್ರ`ಮೆರ್ರಿ ಕ್ರಿಸ್ಮಸ್ʼ ಸಿನಿಮಾ ಜನವರಿ 12ರಂದು ರಿಲೀಸ್ ಆಗಿದೆ. ಬಹುಭಾಷಾ ನಟ, ಕಾಲಿವುಡ್ನ ವಿಜಯ್ ಸೇತುಪತಿ ಮತ್ತು ಬಾಲಿವುಡ್ನ ಕತ್ರಿನಾ ಕೈಫ್ ಮೊದಲ ಬಾರಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಮೊದಲ ದಿನ ಬಾಕ್ಸ್ ಆಫೀಸ್ನಲ್ಲಿ ಮ್ಯಾಜಿಕ್ ಮಾಡುವಲ್ಲಿ ವಿಫಲವಾಗಿದೆ.
ಹಿಂದಿ ಮತ್ತು ತಮಿಳಿನಲ್ಲಿ ಬಿಡುಗಡೆಯಾಗಿರುವ ಈ ಥ್ರಿಲ್ಲರ್ ಚಿತ್ರ ಮೊದಲ ದಿನ ಭಾರತದಲ್ಲಿ ಕೇವಲ 2.55 ಕೋಟಿ ರೂ. ಗಳಿಸಿದೆ. ವೀಕೆಂಡ್ನಲ್ಲಿ ಗಳಿಕೆ ಹೆಚ್ಚಾಗಲಿದೆ ಎಂದು ಚಿತ್ರ ತಂಡ ಹೇಳಿಕೊಂಡಿದೆ.
ಹಿಂದಿ ಮತ್ತು ತಮಿಳಿನ ವಿವಿಧ ಕಲಾವಿದರ ನಟಿಸಿದ್ದಾರೆ. ಕತ್ರಿನಾ ಕೈಫ್ ಮತ್ತು ಶ್ರೀರಾಮ್ ರಾಘವನ್ ಅವರ ಮೊದಲ ತಮಿಳು ಚಿತ್ರ ಇದಾಗಿದೆ. ಹಿಂದಿ ಚಿತ್ರದಲ್ಲಿ ಸಂಜಯ್ ಕಪೂರ್, ವಿನಯ್ ಪಾಠಕ್, ಪ್ರತಿಮಾ ಕಣ್ಣನ್ ಮತ್ತು ಟಿನ್ನು ಆನಂದ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಮಿಳಿನಲ್ಲಿ ರಾಧಿಕಾ ಶರತ್ ಕುಮಾರ್, ಷನ್ಮುಖರಾಜ, ಕೆವಿನ್ ಜೈ ಬಾಬು ಮತ್ತು ರಾಜೇಶ್ ವಿಲಿಯಮ್ಸ್ ನಟಿಸಿದ್ದಾರೆ.