ಜೈಪುರ: ಗುಜರಾತಿ ಯುವತಿ ರಿಯಾ ಸಿಂಘಾ  ‘ಮಿಸ್ ಯೂನಿವರ್ಸ್ ಇಂಡಿಯಾ 2024’  ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಅವರು ಜಾಗತಿಕ ವಿಶ್ವ ಸುಂದರಿ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.ಮಿಸ್ ಯೂನಿವರ್ಸ್ ಇಂಡಿಯಾ 2024 ರ ಗ್ರ್ಯಾಂಡ್ ಫಿನಾಲೆ ಭಾನುವಾರ ರಾಜಸ್ಥಾನದ ಜೈಪುರದಲ್ಲಿ ನಡೆಯಿತು. ಮಿಸ್‌ ಯೂನಿವರ್ಸ್‌ ಇಂಡಿಯಾ ಗೆಲುವಿನ ಬಗ್ಗೆ ರಿಯಾ ಖುಷಿ ಹಂಚಿಕೊಂಡಿದ್ದಾರೆ.

ಇಂದು ನಾನು ಮಿಸ್ ಯೂನಿವರ್ಸ್ ಇಂಡಿಯಾ 2024 ಪ್ರಶಸ್ತಿಯನ್ನು ಗೆದ್ದಿದ್ದೇನೆ. ನಾನು ತುಂಬಾ ಕೃತಜ್ಞಳಾಗಿದ್ದೇನೆ. ಈ ಮಟ್ಟಕ್ಕೆ ಹೋಗಲು ನಾನು ತುಂಬಾ ಕೆಲಸ ಮಾಡಿದ್ದೇನೆ. ಈ ಕಿರೀಟಕ್ಕೆ ನಾನು ಸಾಕಷ್ಟು ಅರ್ಹಳೆಂದು ಪರಿಗಣಿಸಬಹುದು. ಹಿಂದಿನ ವಿಜೇತರಿಂದ ನಾನು ತುಂಬಾ ಸ್ಫೂರ್ತಿ ಪಡೆದಿದ್ದೇನೆ ಎಂದು ಗೆಲುವಿನ ಬಳಿಕ ಪ್ರತಿಕ್ರಿಯಿಸಿದ್ದಾರೆ.

ನಟಿ ಮತ್ತು ಮಿಸ್ ಯೂನಿವರ್ಸ್ ಇಂಡಿಯಾ 2015, ಊರ್ವಶಿ ರೌಟೇಲಾ ಈವೆಂಟ್‌ನಲ್ಲಿ ತೀರ್ಪುಗಾರರಾಗಿದ್ದರು. ಭಾರತವು ಈ ವರ್ಷ ಮತ್ತೆ ವಿಶ್ವ ಸುಂದರಿ ಕಿರೀಟವನ್ನು ಗೆಲ್ಲುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ