ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರ ವೈಭವೋಪೇತ ವಿವಾಹ ಮಹೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಪಾಲ್ಗೊಂಡರು.
Ad
ವಿವಾಹ ಮಹೋತ್ಸವದ ಭಾಗವಾಗಿ ಶನಿವಾರ ನಡೆದ ʻಶುಭ ಆಶೀರ್ವಾದʼ ಕಾರ್ಯಕ್ರಮದಲ್ಲಿ ದೇಶ-ವಿದೇಶಗಳ ಗಣ್ಯರು, ಸೆಲೆಬ್ರಿಟಿಗಳು, ರಾಜಕಾರಣಿಗಳು ಪಾಲ್ಗೊಂಡಿದ್ದರು.
Ad
ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಸಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವಜೋಡಿಗೆ ಆಶೀರ್ವದಿಸಿದರು. ಎಸ್‌ಪಿಜಿ ಭದ್ರತೆಯೊಂದಿಗೆ ಮೋದಿ ಅವರು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಶನ್ ಸೆಂಟರ್‌ಗೆ ಆಗಮಿಸುತ್ತಲೇ ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಸ್ವಾಗತ ಕೋರಿದರು, ಬಳಿಕ ಮೋದಿ ಅವರ ಕಾಲಿಗೆ ನಮಸ್ಕರಿಸಿದರು. ಇದಾದ ಬಳಿಕ ಅಂಬಾನಿ ಕುಟುಂಬವನ್ನು ಭೇಟಿಯಾದ ಮೋದಿ, ಮುಕೇಶ್ ಅಂಬಾನಿ ಪಕ್ಕದಲ್ಲೇ ಕುಳಿತು ಕಾರ್ಯಕ್ರಮ ವೀಕ್ಷಿಸಿದರು. ಕೆಲಕಾಲ ಸಂಗೀತ ಆಲಿಸಿದರು.
Ad
Ad