Bengaluru 27°C
Ad

ಜಪಾನ್ ಭಾಷೆಯಲ್ಲಿ ರಿಲೀಸ್ ಆದ ‘777 ಚಾರ್ಲಿ’ ಸಿನಿಮಾ

ರಕ್ಷಿತ್ ಶೆಟ್ಟಿ ನಟಿಸಿ, ನಿರ್ಮಿಸಿರೋ ‘777 ಚಾರ್ಲಿ’ ಸಿನಿಮಾ ಭರ್ಜರಿ ಗಳಿಕೆ ಮಾಡಿತ್ತು. ಈಗ ಈ ಸಿನಿಮಾ ಜಪಾನ್​ನಲ್ಲಿ ರಿಲೀಸ್ ಆಗಿದೆ. 

ರಕ್ಷಿತ್ ಶೆಟ್ಟಿ ನಟಿಸಿ, ನಿರ್ಮಿಸಿರೋ ‘777 ಚಾರ್ಲಿ’ ಸಿನಿಮಾ ಭರ್ಜರಿ ಗಳಿಕೆ ಮಾಡಿತ್ತು. ಈಗ ಈ ಸಿನಿಮಾ ಜಪಾನ್​ನಲ್ಲಿ ರಿಲೀಸ್ ಆಗಿದೆ. ರಕ್ಷಿತ್ ಶೆಟ್ಟಿ ಅವರು ನಿರ್ಮಾಪಕನಾಗಿಯೂ ಹೆಸರು ಮಾಡುತ್ತಿದ್ದಾರೆ. ಅವರು ‘777 ಚಾರ್ಲಿ’ ಸಿನಿಮಾದಲ್ಲಿ ನಟಿಸುತ್ತಾರೆ ಎಂದಾಗಲೇ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿತ್ತು. ಈ ಚಿತ್ರದ ಟೀಸರ್ ಹಾಗೂ ಟ್ರೇಲರ್​ಗಳು ಗಮನ ಸೆಳೆದವು.

ಈ ಸಿನಿಮಾ 2022ರ ಜೂನ್ 10ರಂದು ಕರ್ನಾಟಕದಾದ್ಯಂತ ಬಿಡುಗಡೆ ಕಂಡಿತು. ವಿದೇಶದಲ್ಲೂ ಚಿತ್ರ ಈಗ ಮೆಚ್ಚುಗೆ ಪಡೆಯುತ್ತಿದೆ. ಭಾರತದ ಅನೇಕ ಸಿನಿಮಾಗಳು ಜಪಾನ್​ನಲ್ಲಿ ರಿಲೀಸ್ ಆಗುತ್ತವೆ.

‘ಕೆಜಿಎಫ್ 2’, ‘ಆರ್​ಆರ್​ಆರ್’ ಮೊದಲಾದ ಸಿನಿಮಾಗಳು ಜಪಾನ್​ನಲ್ಲಿ ಬಿಡುಗಡೆ ಆಗಿ ಮೆಚ್ಚುಗೆ ಪಡೆದಿವೆ. ಈಗ ‘777 ಚಾರ್ಲಿ’ ಸಿನಿಮಾ ಸಮಯ. ಈ ಚಿತ್ರ ಜಪಾನ್ ಭಾಷೆಯಲ್ಲಿ ರಿಲೀಸ್ ಆಗಿದೆ. ಸಿನಿಮಾ ಜೂನ್ 28ರಂದು ಜಪಾನ್​ನಲ್ಲಿ ರಿಲೀಸ್ ಆಗಿದೆ. ಸಿನಿಮಾ ನೋಡಿದ ಅನೇಕರು ಈ ಬಗ್ಗೆ ಟ್ವೀಟ್ ಮಾಡುತ್ತಿದ್ದಾರೆ. ಇದನ್ನು ರಕ್ಷಿತ್ ಶೆಟ್ಟಿ ಅವರು ರೀ-ಟ್ವೀಟ್ ಮಾಡಿಕೊಳ್ಳುತ್ತಿದ್ದಾರೆ.

Ad
Ad
Nk Channel Final 21 09 2023
Ad