ಮುಂಬೈ: ಸುಮಾರು ಮೂರು ವರ್ಷಗಳ ನಂತರ ನಟಿ ರಿಯಾ ಚಕ್ರವರ್ತಿ ಚಿತ್ರರಂಗ ಮತ್ತು ಕಿರುತೆರೆಗೆ ಮರಳಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಕಳೆದ ಮೂರು ವರ್ಷಗಳು ಸವಾಲು, ಚಿಂತೆಯಿಂದ ಕೂಡಿತ್ತು ಎಂದು ಹೇಳಿದ್ದಾರೆ.
ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ರಿಯಾ ಮೇಲೆ ಆರೋಪ ಕೇಳಿಬಂದಿತ್ತು. ಅಲ್ಲದೆ ಪ್ರಕರಣ ಕೂಡ ದಾಖಲಾಗಿದ್ದನ್ನು ಗಮನಿಸಬಹುದು. ಸುಶಾಂತ್ ಸಿಂಗ್ ರಜಪೂತ್ 2020 ರಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದರು. ಇದು ರಾಷ್ಟ್ರವ್ಯಾಪಿ ಕೋಲಾಹಲಕ್ಕೆ ಕಾರಣವಾಗಿತ್ತು ಮುಂಬೈ ಜುಹುದಲ್ಲಿನ ತನ್ನ ಫ್ಲಾಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ಅವರ ಮರಣದ ಬಳಿಕ, ಸುಶಾಂತ್ ತಂದೆ ನಟನ ಗೆಳತಿ ರಿಯಾ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಹಣದ ವರ್ಗಾವಣೆ ಆರೋಪದ ಮೇಲೆ ಪ್ರಕರಣವನ್ನು ದಾಖಲಿಸಿದ್ದರು.