ಮುಂಬೈ: ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ ಅವರ ‘ಕಿಸಿ ಕಾ ಭಾಯ್ ಕಿಸಿ ಕಿ ಜಾನ್’ ಚಿತ್ರ ಏಪ್ರಿಲ್ 21ರಂದು ತೆರೆಕಾಣಲಿದೆ. ಇದೇ ವೇಳೆ ಸಲ್ಮಾನ್ ಖಾನ್ ಅವರು ತಾವು ಜಿಮ್ನಲ್ಲಿ ಕಸರತ್ತು ನಡೆಸುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.
ಇನ್ ಸ್ಟಾ ಗ್ರಾಂನಲ್ಲಿ ಈ ಬಗ್ಗೆ ವಿವರ ಹಂಚಿಕೊಂಡಿರುವ ಅವರು ಜಿಮ್ ಮತ್ತು ಡೈನಿಂಗ್ ಟೇಬಲ್ ನನ್ನಿಷ್ಟದ ಸ್ಥಳಗಳು ಎಂದು ತಿಳಿಸಿದ್ದಾರೆ. ಫರ್ಹಾದ್ ಸಾಮ್ಜಿ ನಿರ್ದೇಶನದ ಸಲ್ಮಾನ್ ಅವರ ‘ಕಿಸಿ ಕಾ ಭಾಯ್ ಕಿಸಿ ಕಿ ಜಾನ್’ ಚಿತ್ರದಲ್ಲಿ ವೆಂಕಟೇಶ್ ದಗ್ಗುಬಾಟಿ, ಪೂಜಾ ಹೆಗ್ಡೆ, ಜಗಪತಿ ಬಾಬು, ಭೂಮಿಕಾ ಚಾವ್ಲಾ, ವಿಜೇಂದರ್ ಸಿಂಗ್, ಅಭಿಮನ್ಯು ಸಿಂಗ್, ರಾಘವ್ ಜುಯಲ್, ಸಿದ್ಧಾರ್ಥ್ ನಿಗಮ್, ಜಸ್ಸಿ ಮುಂತಾದವರು ನಟಿಸಿದ್ದಾರೆ.