ಬೆಂಗಳೂರು: ಅಭಯ್ ವರ್ಮಾ ಮತ್ತು ಶಾರ್ವರಿ ಅಭಿನಯದ ಹಾರರ್-ಕಾಮಿಡಿ ಚಲನಚಿತ್ರ ʻಮುಂಜ್ಯʼ ಜೂನ್ 7 ರಂದು ತೆರೆ ಕಂಡಿತ್ತು. ಸ್ಟಾರ್​ ಕಲಾವಿದರೇ ಇಲ್ಲದ ಸಿನಿಮಾವೊಂದು ಬರೋಬ್ಬರಿ 100 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಗಮನ ಸೆಳೆದಿದೆ. ಪ್ರಭಾಸ್​ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಯಿತು.

ಹಿಂದಿ ಪ್ರೇಕ್ಷಕರ ವಲಯದಲ್ಲಿ ಕೂಡ ಈ ಸಿನಿಮಾ ಸದ್ದು ಮಾಡುತ್ತಿವೆ. ಬಹುತೇಕ ಚಿತ್ರಮಂದಿಗಳನ್ನು ‘ಕಲ್ಕಿ 2898 ಎಡಿ’ ಆವರಿಸಿಕೊಂಡಿದೆ. ಹಾಗಾಗಿ ಈ ಸಿನಿಮಾ ಬಿಡುಗಡೆ ಆದ ನಂತರ ‘ಮುಂಜ್ಯ’ ಕಲೆಕ್ಷನ್​ ಕುಸಿದಿದೆ ಎನ್ನಲಾಗ್ತಿದೆ.

ʻಮುಂಜ್ಯʼ ಭಾರತದ ಮೊದಲ CGI ನಾಯಕನನ್ನು ಒಳಗೊಂಡಿರುವ ಸಿನಿಮಾ ಎಂದು. . ಸಿನಿಮಾ ಬಿಡುಗಡೆ ಮುಂಚೆ ಟೀಸರ್‌ ಬಿಡುಗಡೆಯಾಗಿದ್ದರೂ ಅಷ್ಟಾಗಿ ಸದ್ದು ಮಾಡಿರಲಿಲ್ಲ. ಯಾವಾಗ ಥಿಯೇಟರ್‌ನಲ್ಲಿ ರಿಲೀಸ್‌ ಆಯ್ತೋ ಸಿನಿಮಾ ಒಳ್ಳೆಯ ಕಲೆಕ್ಷನ್‌ ಮಾಡಿದೆ.

ಇನ್ನು ಮುಂಜ್ಯ’ ಸಿನಿಮಾಗೆ ಮೊದಲ ದಿನ 4.21 ಕೋಟಿ ರೂಪಾಯಿ ಕಲೆಕ್ಷನ್​ ಆಗಿತ್ತು. ಎರಡನೇ ದಿನ 7.40 ಕೋಟಿ ರೂಪಾಯಿ ಗಳಿಕೆ ಆಯಿತು. ಮೂರನೇ ದಿನ 8.43 ಕೋಟಿ ರೂಪಾಯಿ ಹರಿದುಬಂತು. ನಂತರ ಪ್ರತಿ ದಿನ 3 ಅಥವಾ 4 ಕೋಟಿ ರೂಪಾಯಿ ಗಳಿಸುತ್ತಾ ಈ ಸಿನಿಮಾ ಮುನ್ನುಗ್ಗಿತು. ನಂತರದ ವಾರಾಂತ್ಯದಲ್ಲಿ ಕಲೆಕ್ಷನ್​ ಹೆಚ್ಚಾಯಿತು. 25 ದಿನಗಳ ಯಶಸ್ವಿ ಪ್ರದರ್ಶನ ಕಂಡು ಈ ಸಿನಿಮಾದ ಒಟ್ಟು ಕಲೆಕ್ಷನ್​ 100 ಕೋಟಿ ರೂಪಾಯಿ ಮೀರಿತ್ತು.

ಮುಂಜ್ಯ ಚಿತ್ರವನ್ನು ಆದಿತ್ಯ ಸರ್ಪೋತದಾರ್ ನಿರ್ದೇಶಿಸಿದ್ದಾರೆ ಮತ್ತು ಶಾರ್ವರಿ, ಅಭಯ್ ವರ್ಮಾ, ಮೋನಾ ಸಿಂಗ್ ಮತ್ತು ಬಾಹುಬಲಿ ಚಲನಚಿತ್ರ ಖ್ಯಾತಿಯ ಸತ್ಯರಾಜ್ ಅವರ ಸಮಗ್ರ ತಾರಾಗಣವನ್ನು ಒಳಗೊಂಡಿದೆ.