Categories: ಮನರಂಜನೆ

ನಾದಬ್ರಹ್ಮ ಹಂಸಲೇಖ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ

ಸಂಗೀತದ ಮೂಲಕ ಕೋಟ್ಯಂತರ ಜನರ ಹೃದಯ ಗೆದ್ದ ಹಂಸಲೇಖ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 71ನೇ ವಯಸ್ಸಿಗೆ  ಕಾಲಿಟ್ಟ  ಅವರಿಗೆ ಈ ಸಂಗೀತ ಮಾಂತ್ರಿಕನಿಗೆ ಸೆಲೆಬ್ರಿಟಿಗಳು, ಅಭಿಮಾನಿಗಳು, ಆಪ್ತರು ಸೋಶಿಯಲ್​ ಮೀಡಿಯಾ ಮೂಲಕ ಶುಭ ಕೋರುತ್ತಿದ್ದಾರೆ.

ಹಂಸಲೇಖ ಅವರ ಸಂಗೀತ ಮತ್ತು ಸಾಹಿತ್ಯದ ಕೊಡುಗೆ ಅಪಾರ. ದಣಿವರಿಯದೇ ಅವರು ಕೆಲಸ ಮಾಡುತ್ತಿದ್ದಾರೆ. ಚಿತ್ರರಂಗದಲ್ಲಿ ಅಪಾರ ಸಂಖ್ಯೆಯ ಜನರಿಗೆ ‘ನಾದಬ್ರಹ್ಮ’ ಹಂಸಲೇಖ ಅವರೇ ಮಾದರಿ. ಅವರನ್ನು ಮಾನಸ ಗುರುಗಳು ಎಂದು ಅನೇಕರು ಕರೆದಿದ್ದಾರೆ.

ಬಹುತೇಕ ಎಲ್ಲ ಸ್ಟಾರ್​ ನಟರ ಸಿನಿಮಾಗಳಿಗೂ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಸಾವಿರಾರು ಸೂಪರ್​ ಹಿಟ್​ ಗೀತೆಗಳನ್ನು ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ.

ಹಂಸಲೇಖ ಅವರ ಸಾಧನೆಗೆ ಸಿಕ್ಕ ಪ್ರಶಸ್ತಿಗಳು ಹಲವು. ಒಂದು ರಾಷ್ಟ್ರ ಪ್ರಶಸ್ತಿ, 6 ಬಾರಿ ಫಿಲ್ಮ್​ ಫೇರ್​ ಪ್ರಶಸ್ತಿ, 10 ಬಾರಿ ರಾಜ್ಯ ಪ್ರಶಸ್ತಿ ಪಡೆದ ಪ್ರತಿಭಾವಂತ ಅವರು. ಹಂಸಲೇಖ ಅವರ ಮೂಲ ಹೆಸರು ಗಂಗರಾಜು. ಚಿಕ್ಕ ವಯಸ್ಸಿನಲ್ಲೇ ಸಂಗೀತದ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು ಅವರು ನಂತರ ಕನ್ನಡ ಚಿತ್ರರಂಗವನ್ನೇ ಆಳುವ ಸಂಗೀತ ನಿರ್ದೇಶಕನಾಗಿ ಬೆಳೆದುನಿಂತರು.

 

Gayathri SG

Recent Posts

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

7 mins ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

19 mins ago

ಪೆನ್​ಡ್ರೈವ್ ಹಂಚಿಕೆ ಪ್ರಕರಣ : ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14…

33 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಗೆ ಹಣಕಾಸಿನ ಸಮಸ್ಯೆ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 13 ಮೇ​​ 2024ರ…

46 mins ago

96 ಲೋಕಸಭಾ ಕ್ಷೇತ್ರಗಳಲ್ಲಿ ಇಂದು 4ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ (4ನೇ ಹಂತವು ಇಂದು (ಮೇ 13) 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ. ಇಂದು 96…

57 mins ago

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

9 hours ago