ಮಂಗಳೂರು: ಕಾಂತಾರ ರಿಷಬ್ ಶೆಟ್ಟಿಗೆ ನ್ಯಾಷನಲ್ ಅವಾರ್ಡ್ ಲಭಿಸಿದ್ದು, ಈ ಬಗ್ಗೆ ನಟ ನಿರ್ದೇಶಕ ರಿಷಬ್ ಶೆಟ್ಟಿ ಫರ್ಸ್ಟ್ ರಿಯಾಕ್ಷನ್ ನೀಡಿದ್ದಾರೆ. ನ್ಯಾಷನಲ್ ಅವಾರ್ಡ್ ನಮ್ಮ ಇಡೀ ತಂಡಕ್ಕೆ ಸಲ್ಲಬೇಕು. ಈ ಸಿನಿಮಾ ದೈವದ ಬಗ್ಗೆ ದೈವ ನರ್ತಕರ ಬಗ್ಗೆ ಅವರ ಸಮುದಾಯದ ಬಗ್ಗೆ ಇರುವ ಸಿನಿಮಾ. ನ್ಯಾಷನಲ್ ಅವಾರ್ಡ್ ಕ್ರೆಡಿಟ್ ದೈವ ನರ್ತಕ ಸಮುದಾಯಕ್ಕೆ ಸೇರಬೇಕು. ದೈವದ ಆಶೀರ್ವಾದ ಇಲ್ಲ ಅಂದಿದ್ರೆ ಸಿನಿಮಾ ಈ ಮಟ್ಟಕ್ಕೆ ಹೋಗುತ್ತಾ ಇರಲಿಲ್ಲ. ದೈವದ ಆಶೀರ್ವಾದದಿಂದ ಸಿನಿಮಾ ಇಲ್ಲಿ ತನಕ ಬಂದಿದೆ ಎಂದರು.

ದೈವಕ್ಕೆ ದೈವದ ಪಾದಕ್ಕೆ ಈ ಅವಾರ್ಡ್ ನ್ನ ಸಲ್ಲಿಸುತ್ತೇನೆ. ಚಿತ್ರ ಮಾಡುವಾಗ ಅವಾರ್ಡ್ ಬರುತ್ತೆ ಎಂದು ಅಂದುಕೊಂಡಿರಲಿಲ್ಲ, ಎಲ್ಲಾ ಜನರ ಪ್ರೀತಿಯಿಂದ ಸಾಧ್ಯವಾಗಿದೆ. ಕಾಂತಾರ ಶೂಟಿಂಗ್ ನಡೆಯುತ್ತಿದೆ ಆದಷ್ಟು ಬೇಗ ನಿರ್ಮಾಪಕರು ರಿಲೀಸ್ ಡೇಟ್ ಅನೌನ್ಸ್ ಮಾಡ್ತಾರೆ, ಕಾಂತಾರ ಒನ್ ಬಹಳ ಚೆನ್ನಾಗಿ ಮೂಡಿ ಬರುತ್ತಿದೆ. ಈ ಹಿಂದೆ ಕಾಂತಾರಕ್ಕೆ ಎಷ್ಟು ಹೆಮ್ಮೆ ಪಟ್ಟಿದ್ದೀರೋ ಅದಕ್ಕಿಂತ ಹೆಚ್ಚು ಹೆಮ್ಮೆ ಪಡುತ್ತೀರ

ಕಾಂತಾರ ಬರುವ ಮುಂಚೆ ಸುಮಾರು ಸಿನಿಮಾಗಳಲ್ಲಿ ದೈವಾರಾಧನೆ ಬಂದಿದೆ. ಚೋಮನ ದುಡಿಯಿಂದ ಹಿಡಿದು ಅನೇಕ ಪುಸ್ತಕಗಳಲ್ಲೂ ದೈವಾರಾಧನೆ ಬಂದಿದೆ, ನಾವು ಮೊದಲ ಬಾರಿಗೆ ಮಾಡಲಿಲ್ಲ. ಹಲವಾರು ಭಾಗಗಲ್ಲಿ ಪ್ರದರ್ಶನವನ್ನೂ ಮಾಡಿದ್ದಾರೆ. ಎಷ್ಟೊ ತುಳು ಸಿನಿಮಾಗಳು ದೈವಾರಾಧನೆ ಬಳಸಿ ಪ್ರಶಸ್ತಿ ಪಡೆದಿದೆ. ಸಿನಿಮಾ ಬಂದಾಗ ತುಂಬಾ ಪಾಪ್ಯುಲರ್ ಆದಾಗ ಮೂಲ ಸಂಸ್ಕೃತಿ ಬಗ್ಗೆ ಗೊತ್ತಿಲ್ಲದವರು ಈ ರೀತಿ ಮಾಡುತ್ತಾರೆ . ಬೇರೆ ಬೇರೆ ಸ್ಟೇಜ್ ಗಳಲ್ಲಿ ಕಾರ್ಯಕ್ರಮದಲ್ಲಿ ಹಾಕುವಾಗ ನೋವಾಗುತ್ತೆ. ನಾನು ಗುತ್ತಿನ ಮನೆಯವನಾಗಿ ದೈವವನ್ನ ನಂಬಿಕೆ ಇಟ್ಟುಕೊಂಡು ಪೂಜೆ ಮಾಡಿಕೊಂಡು ಬರುವವನು ಎಂದರು.

ನಾವು ಸಿನಿಮಾ ಮಾಡಬೇಕಾದರೆ ಆ ಸಮುದಾಯದವರ ಸಹಾಯ ಪಡೆದು ಮಾಡಿದ್ದೇವೆ. ಅಷ್ಟು ಶ್ರದ್ಧೆಯಿಂದ ಅದನ್ನ ಮಾಡಿಕೊಂಡು ಬಂದಿದ್ದೇವೆ. ನಮಗೆ ಕೇವಲ ಅದೊಂದು ಸಿನಿಮಾ ಅಲ್ಲ, ಸಿನಿಮಾದಲ್ಲಿ ಬಣ್ಣ ಹಚ್ಚುತ್ತೇವೆ ವೇಷ ಹಾಕುತ್ತೇವೆ ಅನ್ನೋ ರೀತಿಯಲ್ಲ ನಿಜವಾಗಲೂ ಅದೊಂದು ದೈವದ ಸೇವೆ ಅನ್ನೋ ರೀತಿ ಮಾಡಿಕೊಂಡು ಬಂದಿದ್ದೇವೆ. ಹೊರಗಿನವರು ಇದನ್ನ ಅಪಹಾಸ್ಯ ಮಾಡಿದಾಗ ನಂಬಿದವರಿಗೆ ಬೇಜಾರಗೋದು ಸಹಜ. ನಾನು ಆರಂಭದಿಂದಲೂ ಜನರಲ್ಲಿ ಮನವಿ ಮಾಡಿಕೊಂಡು ಬಂದಿದ್ದೇನೆ. ನಾನು ಕಾಂತರವನ್ನ ಸಿನಿಮಾದ ರೀತಿಯಲ್ಲಿ ಮಾಡಿಲ್ಲ ಹೊರಗಿನವರಿಗೆ ದೈವವನ್ನ ಸ್ಟೇಜ್ ಮೇಲೆ ಅನುಕರಣೆ ಮಾಡಬೇಡಿ ಎಂದು ಮನವಿ ಮಾಡಿದ್ದೇನೆ ಎಂದರು.

ಕಾಂತಾರ ಬರುವ ಮುಂಚೆ ಸುಮಾರು ಸಿನಿಮಾಗಳಲ್ಲಿ ದೈವಾರಾಧನೆ ಬಂದಿದೆ, ಚೋಮನ ದುಡಿಯಿಂದ ಹಿಡಿದು ಅನೇಕ ಪುಸ್ತಕಗಳಲ್ಲೂ ದೈವಾರಾಧನೆ ಬಂದಿದೆ. ನಾವು ಮೊದಲ ಬಾರಿಗೆ ಮಾಡಲಿಲ್ಲ. ಹಲವಾರು ಭಾಗಗಲ್ಲಿ ಪ್ರದರ್ಶನವನ್ನೂ ಮಾಡಿದ್ದಾರೆ . ಎಷ್ಟೊ ತುಳು ಸಿನಿಮಾಗಳು ದೈವಾರಾಧನೆ ಬಳಸಿ ಪ್ರಶಸ್ತಿ ಪಡೆದಿದೆ. ಸಿನಿಮಾ ಬಂದಾಗ ತುಂಬಾ ಪಾಪ್ಯುಲರ್ ಆದಾಗ ಮೂಲ ಸಂಸ್ಕೃತಿ ಬಗ್ಗೆ ಗೊತ್ತಿಲ್ಲದವರು ಈ ರೀತಿ ಮಾಡುತ್ತಾರೆ. ಬೇರೆ ಬೇರೆ ಸ್ಟೇಜ್ ಗಳಲ್ಲಿ ಕಾರ್ಯಕ್ರಮದಲ್ಲಿ ಹಾಕುವಾಗ ನೋವಾಗುತ್ತೆ, ನಾನು ಗುತ್ತಿನ ಮನೆಯವನಾಗಿ ದೈವವನ್ನ ನಂಬಿಕೆ ಇಟ್ಟುಕೊಂಡು ಪೂಜೆ ಮಾಡಿಕೊಂಡು ಬರುವವನು, ನಾವು ಸಿನಿಮಾ ಮಾಡಬೇಕಾದರೆ ಆ ಸಮುದಾಯದವರ ಸಹಾಯ ಪಡೆದು ಮಾಡಿದ್ದೇವೆ. ಅಷ್ಟು ಶ್ರದ್ಧೆಯಿಂದ ಅದನ್ನ ಮಾಡಿಕೊಂಡು ಬಂದಿದ್ದೇವೆ

ನಮಗೆ ಕೇವಲ ಅದೊಂದು ಸಿನಿಮಾ ಅಲ್ಲ, ಸಿನಿಮಾದಲ್ಲಿ ಬಣ್ಣ ಹಚ್ಚುತ್ತೇವೆ ವೇಷ ಹಾಕುತ್ತೇವೆ ಅನ್ನೋ ರೀತಿಯಲ್ಲ. ನಿಜವಾಗಲೂ ಅದೊಂದು ದೈವದ ಸೇವೆ ಅನ್ನೋ ರೀತಿ ಮಾಡಿಕೊಂಡು ಬಂದಿದ್ದೇವೆ, ಹೊರಗಿನವರು ಇದನ್ನ ಅಪಹಾಸ್ಯ ಮಾಡಿದಾಗ ನಂಬಿದವರಿಗೆ ಬೇಜಾರಗೋದು ಸಹಜ. ನಾನು ಆರಂಭದಿಂದಲೂ ಜನರಲ್ಲಿ ಮನವಿ ಮಾಡಿಕೊಂಡು ಬಂದಿದ್ದೇನೆ. ನಾನು ಕಾಂತರವನ್ನ ಸಿನಿಮಾದ ರೀತಿಯಲ್ಲಿ ಮಾಡಿಲ್ಲ, ಹೊರಗಿನವರಿಗೆ ದೈವವನ್ನ ಸ್ಟೇಜ್ ಮೇಲೆ ಅನುಕರಣೆ ಮಾಡಬೇಡಿ ಎಂದು ಮನವಿ ಮಾಡಿದ್ದೇನೆ.