ಕನ್ನಡ ಕಿರುತೆರೆಯಲ್ಲಿ ಲಕ್ಷ್ಮೀ ಬಾರಮ್ಮ ಸೀರಿಯಲ್ ಮೂಲಕ ಅಭಿಮಾನಿ ಬಳಗ ಸೃಷ್ಟಿಸಿಕೊಂಡು, ಜನಮನಗೆದ್ದು, ಗೊಂಬೆ ಅಂತಲೇ ಖ್ಯಾತಿ ಪಡೆದಿರೋ ನೇಹಾ ಗೌಡ ದಂಪತಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವನ್ನು ಶೇರ್ ಮಾಡಿಕೊಂಡಿರೋ ನೇಹಾ ಗೌಡ ಹಾಗೂ ಚಂದನ್ ಗೌಡ ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ನಟಿ ನೇಹಾ ಗೌಡ ಹಾಗೂ ಚಂದನ್ ಗೌಡ ಫೆಬ್ರವರಿ 18, 2018ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾಗಿ 6 ವರ್ಷಗಳ ಬಳಿಕ ನೇಹಾ ಹಾಗೂ ಚಂದನ್ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಸದ್ಯ ನೇಹಾ ಗೌಡ ಅವರು ಶೇರ್ ಮಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ವಿಡಿಯೋ ನೋಡಿದ ಅಭಿಮಾನಿಗಳು ನೇಹಾ ಗೌಡ ದಂಪತಿಗೆ ಶುಭ ಹಾರೈಸಿದ್ದಾರೆ.
View this post on Instagram

