Bengaluru 22°C
Ad

ಕೊನೆಗೂ ತೆರೆಗೆ ಬರಲಿದೆ ಪ್ರಸಿದ್ಧ ಕಾದಂಬರಿ ‘ಜುಗಾರಿ ಕ್ರಾಸ್

'ಜುಗಾರಿ ಕ್ರಾಸ್' ಈ ಪ್ರಸಿದ್ಧ ಕಾದಂಬರಿಯನ್ನು ಪೂರ್ಣಚಂದ್ರ ತೇಜಸ್ವಿ ಅವರ ಅಭಿಮಾನಿಗಳು ಓದದೆ ಇರಲು ಸಾಧ್ಯವೇ ಇಲ್ಲ. ಓದಲೇಬೇಕಾದ ಬಹುಮುಖ್ಯ ಕಾದಂಬರಿಗಳಲ್ಲಿ 'ಜುಗಾರಿ ಕ್ರಾಸ್' ಕೂಡ ಒಂದು. ಮಲೆನಾಡಿನ ಕೃಷಿಕ ದಂಪತಿಗಳ ಸ್ವಾರಸ್ಯಕರ ಕಥೆ ಈ 'ಜುಗಾರಿ ಕ್ರಾಸ್'. ವನ್ಯ ಸಂಪತ್ತು ಕಳ್ಳತನ, ದರೋಡೆ, ಭೂಗತ ಕೆಲಸಗಳ ಬಗ್ಗೆ ವಿವರಿಸುತ್ತಾ ಜನರು ಪ್ರಕೃತಿ ಸಂಪತ್ತನ್ನು ಹೇಗೆ ಲೂಟಿ ಮಾಡುತ್ತಿದ್ದಾರೆ ಎನ್ನುವುದನ್ನು ಈ ಕಾದಂಬರಿಯಲ್ಲಿ ರೋಚಕವಾಗಿ ಹೇಳಿದ್ದಾರೆ ಪೂಚಂತೇ.

‘ಜುಗಾರಿ ಕ್ರಾಸ್’ ಈ ಪ್ರಸಿದ್ಧ ಕಾದಂಬರಿಯನ್ನು ಪೂರ್ಣಚಂದ್ರ ತೇಜಸ್ವಿ ಅವರ ಅಭಿಮಾನಿಗಳು ಓದದೆ ಇರಲು ಸಾಧ್ಯವೇ ಇಲ್ಲ. ಓದಲೇಬೇಕಾದ ಬಹುಮುಖ್ಯ ಕಾದಂಬರಿಗಳಲ್ಲಿ ‘ಜುಗಾರಿ ಕ್ರಾಸ್’ ಕೂಡ ಒಂದು. ಮಲೆನಾಡಿನ ಕೃಷಿಕ ದಂಪತಿಗಳ ಸ್ವಾರಸ್ಯಕರ ಕಥೆ ಈ ‘ಜುಗಾರಿ ಕ್ರಾಸ್’. ವನ್ಯ ಸಂಪತ್ತು ಕಳ್ಳತನ, ದರೋಡೆ, ಭೂಗತ ಕೆಲಸಗಳ ಬಗ್ಗೆ ವಿವರಿಸುತ್ತಾ ಜನರು ಪ್ರಕೃತಿ ಸಂಪತ್ತನ್ನು ಹೇಗೆ ಲೂಟಿ ಮಾಡುತ್ತಿದ್ದಾರೆ ಎನ್ನುವುದನ್ನು ಈ ಕಾದಂಬರಿಯಲ್ಲಿ ರೋಚಕವಾಗಿ ಹೇಳಿದ್ದಾರೆ ಪೂಚಂತೇ.

ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದ್ದು ಗಮನ ಸೆಳೆಯುತ್ತಿದೆ. ಈ ಸಿನಿಮಾ ಗುರುದತ್ ಗಾಣಿಗ ಫಿಲ್ಮ್ ಹಾಗು ಸಪ್ತಗಿರಿ ಎಂಟರ್ಟೈನ್ಮೆಂಟ್ ಸಹಯೋಗದಲ್ಲಿ ನಿರ್ಮಾಣವಾಗಿತ್ತಿದೆ. ಜುಗಾರಿ ಕ್ರಾಸ್ ಕಾದಂಬರಿಯನ್ನು ಸಿನಿಮಾ ಮಾಡಬೇಕೆಂದು ಕನಸು ಕಂಡವರು ಅನೇಕರು. ಸ್ಯಾಂಡಲ್ ವುಡ್ ನ ದೊಡ್ಡ ದೊಡ್ಡ ನಿರ್ದೇಶಕರು, ಕಲಾವಿದರು ಪ್ರಯತ್ನ ಪಟ್ಟಿದ್ದರು. ಆದರೆ ಕಾರ್ಯರೂಪಕ್ಕೆ ಬಂದಿರಲಿಲ್ಲ. ಇದೀಗ ಕೊನೆಗೂ ಕಾಲ ಕೂಡಿ ಬಂದಿದೆ. ಜುಗಾರಿ ಕ್ರಾಸ್ ಕಾಂದಬರಿಯನ್ನು ತೆರೆಮೇಲೆ ಕಣ್ತುಂಬಿಕೊಳ್ಳುವ ಸಮಯ ಬಂದಿದೆ.

Ad
Ad
Nk Channel Final 21 09 2023