Bengaluru 30°C

ರಂಗ ನಿರ್ದೇಶಕ ಮಂಡ್ಯ ರಮೇಶ್‌ಗೆ ಪಂಚಮಿ ಪುರಸ್ಕಾರ ಪ್ರದಾನ

ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣ

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆದ ಸಂಸ್ಕೃತಿ ಉತ್ಸವದ ಎರಡನೇ ದಿನವಾದ ಶುಕ್ರವಾರ ಉಡುಪಿ ಪಂಚಮಿ ಟ್ರಸ್ಟ್ ಪ್ರಾಯೋಜಿತ ಪಂಚಮಿ ಪುರಸ್ಕಾರವನ್ನು ರಂಗ ನಿರ್ದೇಶಕ ಹಾಗೂ ಚಿತ್ರನಟ ಮಂಡ್ಯ ರಮೇಶ್‌ಗೆ ಪ್ರದಾನ ಮಾಡಲಾಯಿತು.


ಪ್ರಶಸ್ತಿ ಸ್ವೀಕರಿಸಿದ ಮಂಡ್ಯ ರಮೇಶ್ ಮಾತನಾಡಿ, ರಂಗ ಕಲಾವಿದ ಆಗುವುದು ಸುಲಭದ ಕೆಲಸ ಅಲ್ಲ. ಅದು ಸಾಹಸ ಕಾರ್ಯವಾಗಿದೆ. ಗಾಂಧಿಯನ್ನು ಬದಲಾಯಿಸಿರುವುದು ಇದೇ ರಂಗಭೂಮಿ. ಜಗತ್ತಿನ ಎಲ್ಲ ಕಲೆಗಳ ಮೂಲ ಅಸ್ತಿತ್ವ ಜಾನಪದದಲ್ಲಿ ಇದೆ. ರಾಮಾಯಣ ಮಹಾ ಭಾರತಗಳು ಬದುಕಿನ ರೂಪಕಗಳು ಎಂದು ತಿಳಿಸಿದರು.


ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಯಕ್ಷರಂಗಾಯಣ ಕಾರ್ಕಳ ನಿರ್ದೇಶಕ ಬಿ.ಆರ್. ವೆಂಕಟರಮಣ ಐತಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಎಂ.ಹರೀಶ್ಚಂದ್ರ ಮಾತನಾಡಿದರು.


ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅಭಿನಂದನ ಮಾತುಗಳನ್ನಾಡಿದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಉಡುಪಿ ವಿಶ್ವನಾಥ್ ಶೆಣೈ, ಅಧ್ಯಕ್ಷ ಪ್ರೊ.ಶಂಕರ್, ಉಪಾಧ್ಯಕ್ಷ ವಿಘ್ನೇಶ್ವರ ಅಡಿಗ, ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜೋಶಿ, ಸುಗುಣ ಸುವರ್ಣ ಉಪಸ್ಥಿತರಿದ್ದರು.


ಪಂಚಮಿ ಪುರಸ್ಕಾರದ ಸಂಚಾಲಕ ಜನಾರ್ದನ ಕೊಡವೂರು ಸ್ವಾಗತಿಸಿದರು. ಪ್ರತಿಷ್ಠಾನದ ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ ವಂದಿಸಿದರು. ಕಾರ್ಯದರ್ಶಿ ಪೂರ್ಣಿಮಾ ಜನಾರ್ದನ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಮಂಡ್ಯ ರಮೇಶ್ ನಿರ್ದೇಶನ ‘ಚೋರ ಚರಣದಾಸ’ ನಾಟಕ ಪ್ರದರ್ಶನ ಗೊಂಡಿತು.


Nk Channel Final 21 09 2023