Bengaluru 29°C
Ad

ರೇವ್ ಪಾರ್ಟಿಯಲ್ಲಿ ನಟಿ ಹೇಮಾ ಭಾಗಿಯಾಗಿದ್ದು ನಿಜ: ಪೊಲೀಸ್ ಕಮಿಷನರ್ ಸ್ಪಷ್ಟನೆ

Hema (1)

ಬೆಂಗಳೂರು: ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯ ಫಾರ್ಮ್ ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ತಿದೆ. ಈ ಪ್ರಕರಣದಲ್ಲಿ ಹೇಮಾ ಹೆಸರು ಕೇಳಿ ಬಂದಿತ್ತು. ನಟಿ ತಾವು ಹೈದರಾಬಾದ್‌ನಲ್ಲಿರೋದಾಗಿ ಹೈಡ್ರಾಮಾ ಮಾಡಿದ್ದರು.

ಇದೀಗ ಅಸಲಿ ಹೊರಬಿದ್ದಿದೆ. ಹೇಮಾ ಕೂಡ ರೇವ್ ಪಾರ್ಟಿಯಲ್ಲಿ ಇದ್ದರು ಎಂಬುದನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸ್ಪಷ್ಟನೆ ನೀಡಿದ್ದಾರೆ

ರೇವ್ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಭಾಗಿಯಾಗಿದ್ದು ಸತ್ಯ’ ಎಂದು ಪೊಲೀಸ್ ಆಯುಕ್ತ ದಯಾನಂದ್ ಕ್ಲ್ಯಾರಿಟಿ ನೀಡಿದ್ದಾರೆ. ಇದೇ ವೇಳೆ ಫಾರ್ಮ್‌ ಹೌಸ್‌ನಲ್ಲೇ ನಟಿ ವಿಡಿಯೋ ಮಾಡಿ ಹೇಳಿಕೆ ಬಿಡುಗಡೆ ಮಾಡಿರುವ ಪ್ರಕರಣದ ಕುರಿತು ದಯಾನಂದ್ ಮಾತನಾಡಿದ್ದಾರೆ. ಯಾವ ಸಂದರ್ಭದಲ್ಲಿ ವಿಡಿಯೋ ಮಾಡಿದ್ದಾರೆಂಬ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ದಯಾನಂದ್ ಹೇಳಿದ್ದಾರೆ.

ಸದ್ಯ ಹೇಮಾ ಅವರ ರಕ್ತದ ಮಾದರಿ ತೆಗೆದುಕೊಂಡು ಅವರನ್ನು ಕಳುಹಿಸಲಾಗಿದೆ. ಮೆಡಿಕಲ್ ಟೆಸ್ಟ್ ಬಳಿಕ ಸ್ಟೇಷನ್ ಬೇಲ್ ಮೇಲೆ ಹೇಮಾರನ್ನು ಬಿಡುಗಡೆ ಮಾಡಲಾಗಿದೆ ಎಂದು ದಯಾನಂದ್ ಮಾತನಾಡಿದ್ದಾರೆ.

Ad
Ad
Nk Channel Final 21 09 2023
Ad