‘ಗೋಲ್ಡನ್‌ ಮೂವೀಸ್‌’ ಲಾಂಛನದಲ್ಲಿ ಶಿಲ್ಪಾ ಗಣೇಶ್‌ ನಿರ್ಮಾಣ ಮಾಡಿರುವ, ಸಂದೀಪ್‌ ಬೆದ್ರ ನಿರ್ದೇಶನದ ‘ಪಿಚ್ಚರ್‌’ ಸಿನಿಮಾವು ಆಗಸ್ಟ್‌ 7ರಂದು ತೆರೆಕಾಣಲಿದೆ.

ತುಳು ಹಾಗೂ ಕನ್ನಡ ಭಾಷೆಗಳಲ್ಲಿ ನಿರ್ಮಾಣವಾಗಿರುವ ಈ ಚಿತ್ರದ ಟ್ರೇಲರ್‌ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಇದು ಸಂದೀಪ್ ಬೆದ್ರ ನಿರ್ದೇಶನದ ಚೊಚ್ಚಲ ಚಿತ್ರವಾಗಿದೆ. ಕೌಟುಂಬಿಕ, ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಿತ್ಯಪ್ರಕಾಶ್‌ ಬಂಟ್ವಾಳ್‌ ನಾಯಕರಾಗಿ ನಟಿಸಿದ್ದಾರೆ. ನಾಯಕಿಯಾಗಿ ಅಮೃತ ಸುದು ಅಭಿನಯಿಸಿದ್ದಾರೆ.

ದೇವದಾಸ್ ಕಾಪಿಕಾಡ್, ನವೀನ್ ಡಿ.ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರ್, ಸಾಯಿಕೃಷ್ಣ, ವಜ್ರಧೀರ್ ಜೈನ್, ಸದಾಶಿವ ಅಮಿನ್, ಪ್ರಸನ್ನ ಶೆಟ್ಟಿ ಬೈಲೂರ್‌ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಸಂತೋಷ್ ರೈ ಪಾತಾಜೆ ಹಾಗೂ ಚಂದ್ರಶೇಖರ್ ಕೆ.ಎಸ್ ಛಾಯಾಚಿತ್ರಗ್ರಹಣ, ರಾಜು ಆರ್ಯನ್ ಸಂಕಲನ, ಧನಂಜಯ್ ಬಿ.- ಶ್ರೀರಾಜು ನೃತ್ಯ ನಿರ್ದೇಶನ, ಥ್ರಿಲ್ಲರ್‌ ಮಂಜು ಸಾಹಸ ನಿರ್ದೇಶನ ಚಿತ್ರಕ್ಕಿದೆ. ಸ್ಯಾಮುಯೆಲ್ ಅಭಿ ಸಂಗೀತ ನೀಡಿರುವ ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಶಿಲ್ಪಾ ಗಣೇಶ್ ಅವರೂ ಜಸ್ಕರಣ್‌ ಸಿಂಗ್‌ ಜೊತೆಗೂಡಿ ‘ಗೋಕುಲದ ರಾಧೆ’ ಎಂಬ ಹಾಡನ್ನು ಹಾಡಿದ್ದಾರೆ.