News Karnataka Kannada
Sunday, April 14 2024
Cricket
ಮನರಂಜನೆ

ನಾನು ಬದುಕಿದ್ದೇನೆ ಎಂದು ವಿಡಿಯೋ ಹಂಚಿಕೊಂಡ ಪೂನಂ ಪಾಂಡೆ

ನಟಿ ಪೂನಂ ಪಾಂಡೆ ನಿನ್ನೆ (ಫೆ. 2) ರಂದು ಗರ್ಭಕಂಠ ಕ್ಯಾನ್ಸರ್ ನಿಂದ ನಿಧನರಾಗಿದ್ದಾರೆ ಎಂದು ಸುದ್ದಿ ವೈರಲ್ ಆಗಿತ್ತು. ಆದರೆ ಇಂದು ಸ್ವತಃ ಪೂನಂ ಪಾಂಡೆ ಅವರೇ ಬದುಕಿದ್ದೇನೆ. ತಾವು ಸುಳ್ಳು ಹೇಳಿರುವುದಾಗಿ ಅವರು ಒಪ್ಪಿಕೊಂಡಿದ್ದಾರೆ. ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಈ ರೀತಿ ಮಾಡಿದೆ ಎಂದು ಅವರು ಹೇಳಿದ್ದಾರೆ.
Photo Credit : News Kannada

ನಟಿ ಪೂನಂ ಪಾಂಡೆ ನಿನ್ನೆ (ಫೆ. 2) ರಂದು ಗರ್ಭಕಂಠ ಕ್ಯಾನ್ಸರ್ ನಿಂದ ನಿಧನರಾಗಿದ್ದಾರೆ ಎಂದು ಸುದ್ದಿ ವೈರಲ್ ಆಗಿತ್ತು. ಆದರೆ ಇಂದು ಸ್ವತಃ ಪೂನಂ ಪಾಂಡೆ ಅವರೇ ಬದುಕಿದ್ದೇನೆ. ತಾವು ಸುಳ್ಳು ಹೇಳಿರುವುದಾಗಿ ಅವರು ಒಪ್ಪಿಕೊಂಡಿದ್ದಾರೆ. ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಈ ರೀತಿ ಮಾಡಿದೆ ಎಂದು ಅವರು ಹೇಳಿದ್ದಾರೆ.

‘ಪೂನಂ ಪಾಂಡೆ ಮೃತಪಟ್ಟಿದ್ದಾರೆ’ ಎಂದು ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಲಾಯಿತು. ಅವರ ಮ್ಯಾನೇಜರ್ ಪಾರುಲ್ ಚಾವ್ಲಾ ಕೂಡ ಈ ವಿಚಾರ ಖಚಿತಪಡಿಸಿದ್ದರು. ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಅವರ ಸಾವಿಗೆ ಸಂತಾಪ ಸೂಚಿಸಿದ್ದರು.

ಇಂದು ಪೂನಂ ಪಾಂಡೆ ಪೋಸ್ಟ್​ ಒಂದನ್ನು ಹಂಚಿಕೊಂಡಿದ್ದು ಇದರಲ್ಲಿ, ಸಾವಿನ ಸುಳ್ಳು ಸುದ್ದಿ ಹಬ್ಬಿಸಲು ಕಾರಣ ಇದೆ ಎಂದು ಬರೆದುಕೊಂಡಿದ್ದಾರೆ. ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಹೀಗೆ ಮಾಡಿದ್ದಾರಂತೆ. ‘ನಾನು ಬದುಕಿದ್ದೇನೆ. ಗರ್ಭಕಂಠ ಕ್ಯಾನ್ಸರ್​ನಿಂದ ನಾನು ಸತ್ತಿಲ್ಲ. ಆದರೆ, ಈ ರೋಗವನ್ನು ಹೇಗೆ ಎದುರಿಸಬೇಕು ಎನ್ನುವ ಜ್ಞಾನ ಇಲ್ಲದೆ ಸಾವಿರಾರು ಮಹಿಳೆಯರು ಸಾಯುತ್ತಿದ್ದಾರೆ. ಇತರ ಕೆಲವು ಕ್ಯಾನ್ಸರ್‌ಗಳಿಗಿಂತ ಇದು ಭಿನ್ನವಾಗಿದೆ. ಗರ್ಭಕಂಠದ ಕ್ಯಾನ್ಸರ್ ಸಂಪೂರ್ಣವಾಗಿ ತಡೆಯಬಹುದು. HPV ಲಸಿಕೆ ಮತ್ತು ಆರಂಭಿಕ ಪತ್ತೆ ಪರೀಕ್ಷೆಗಳಿಂದ ಇದು ಸಾಧ್ಯ. ಈ ಕಾಯಿಲೆಯಿಂದ ತಮ್ಮ ಪ್ರಾಣ ಕಳೆದುಕೊಳ್ಳದಂತೆ ನೋಡಿಕೊಳ್ಳುವುದು ನಮ್ಮ ಕೈಯಲ್ಲೇ ಇದೆ’ ಎಂದು ಅವರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು