ಪ್ರಭಾಸ್ ನಟನೆಯ ಕಲ್ಕಿ ಸಿನಿಮಾದ ಬಿಡುಗಡೆ ದಿನಾಂಕ ಬದಲಾಗುತ್ತಲೇ ಇತ್ತು, ಆದ್ರೆ ಈಗ ಕೊನೆಗೂ ಸಿನಿಮಾ ಬಿಡುಗಡೆಯ ಡೇಟ್ ಸಿಕ್ಕಿದೆ.
ಅಂತಿಮವಾಗಿ ಜೂನ್ 20ರಂದು ಚಿತ್ರ ಬಿಡುಗಡೆ ಮಾಡುವುದಾಗಿ ತಿಳಿದು ಬಂದಿದೆ. ಚುನಾವಣೆ, ಫಲಿತಾಂಶ ಎಲ್ಲವೂ ಮುಗಿದ ನಂತರ ಕಲ್ಕಿ ಬಿಡುಗಡೆ ಆಗಲಿದೆ.
ಬಿಡುಗಡೆಗೂ ಮುನ್ನ ಕಲ್ಕಿ ಸಿನಿಮಾ ಹಿಂದಿ ಭಾಷೆಯಲ್ಲೇ 175 ಕೋಟಿ ರೂಪಾಯಿಗೆ ಒಟಿಟಿಗೆ (OTT) ಸೇಲ್ ಆಗಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ದಕ್ಷಿಣದ ಭಾಷೆಗಳಿಗೂ ನೂರಾರು ಕೋಟಿ ಕೊಟ್ಟು ಖರೀದಿಸಲಾಗಿದೆ ಎಂದು ಹೇಳಲಾಗುತ್ತಿದೆ. ಸಿನಿಮಾ ರಿಲಿಸ್ ಗೂ ಮುನ್ನ ದಾಖಲೆಯ ಮೊತ್ತ ಎನ್ನುವುದು ಸಿನಿ ಪಂಡಿತರ ಲೆಕ್ಕಾಚಾರ.
ಈ ಸಿನಿಮಾದಲ್ಲಿ ಪ್ರಭಾಸ್ ಭೈರವ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಜುಟ್ಟು ಬಿಟ್ಟುಕೊಂಡು ಸ್ಟೈಲಿಶ್ ಆಗಿ ಕಂಡಿದ್ದಾರೆ ಪ್ರಭಾಸ್. ಈ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಈ ಸಿನಿಮಾ ನಾನಾ ಕಾರಣಗಳಿಂದಾಗಿ ಕುತೂಹಲ ಮೂಡಿಸಿದ್ದು ಇನ್ನು ಬಿಡುಗಡೆಯಾದ ಮೇಲೆ ತಿಳೀಯ್ಬೇಕಷ್ಟೇ .