Ad

33ರ ಹರೆಯದಲ್ಲೇ ನೇಣಿಗೆ ಶರಣಾದ ಖ್ಯಾತ ಕಾರ್ಯಾಕಾರಿ ನಿರ್ಮಾಪಕಿ

ಟಾಲಿವುಡ್‌ ಸಿನಿಮಾರಂಗದ ಕಾರ್ಯಕಾರಿ ನಿರ್ಮಾಪಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಸ್ವಪ್ನಾ ವರ್ಮಾ(33) ತಾನಿದ್ದ ಅಪಾರ್ಟ್‌ ಮೆಂಟ್‌ ನಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.

ಹೈದರಾಬಾದ್:‌ ಟಾಲಿವುಡ್‌ ಸಿನಿಮಾರಂಗದ ಕಾರ್ಯಕಾರಿ ನಿರ್ಮಾಪಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಸ್ವಪ್ನಾ ವರ್ಮಾ(33) ತಾನಿದ್ದ ಅಪಾರ್ಟ್‌ ಮೆಂಟ್‌ ನಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.

Ad
300x250 2

ಮೂಲತಃ ಆಂಧ್ರದ ರಾಜಮಂಡ್ರಿದವರಾದ ಸ್ವಪ್ನಾ ಕಳೆದ ಮೂರು ವರ್ಷಗಳ ಹಿಂದೆ ಸಿನಿಮಾರಂಗದಲ್ಲಿ ಕೆಲಸ ಮಾಡುವ ಉದ್ದೇಶದಿಂದ ಹೈದರಾಬಾದ್‌ ಗೆ ಬಂದಿದ್ದರು. ಅವರು ಕಳೆದ ಹಲವಾರು ವರ್ಷಗಳಿಂದ ತೆಲುಗು ಚಿತ್ರರಂಗದಲ್ಲಿ ಕಾರ್ಯಕಾರಿ ನಿರ್ಮಾಪಕಿಯಾಗಿ ಕೆಲಸ ಮಾಡುತ್ತಿದ್ದರು.

ಮಾದಾಪುರದ ಕಾವೂರಿ ಹಿಲ್ಸ್‌ನಲ್ಲಿರುವ ಟೀಗಲ್ ಹೌಸ್ ಅಪಾರ್ಟ್‌ಮೆಂಟ್‌ನ ಫ್ಲಾಟ್ 101 ರಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಆರು  ತಿಂಗಳಿಂದ ಕೆಲಸದ ಕೊರತೆಯಿಂದ ಮಾನಸಿಕವಾಗಿ ನೊಂದಿದ್ದ ಅವರು  ಅದೇ ಫ್ಲಾಟ್‌ ನಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.

ಅವರ ಕೋಣೆಯಿಂದ ದುರ್ವಾಸನೆ ಬರುತ್ತಿದ್ದ ಕಾರಣ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆಕೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Ad
Ad
Nk Channel Final 21 09 2023
Ad