ಚಿಕ್ಕಬಳ್ಳಾಪುರ: ವಿಧಾನಸೌಧದ ಆವರಣದಲ್ಲಿ ಕನ್ನಡ ತಾಯಿ ಭುವನೇಶ್ವರಿ ಪ್ರತಿಮೆ ಸ್ಥಾಪನೆಗೆ ನಟ ಚೇತನ್ ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರ 25 ಅಡಿಯ ಭುವನೇಶ್ವರಿ ಪ್ರತಿಮೆ ಸ್ಥಾಪನೆ ಮಾಡಿರುವುದು ಕನ್ನಡ ಪರ ಅಲ್ಲ, ಮೌಢ್ಯದ ಪರʼ ಎಂದಿದ್ದಾರೆ.

ಎಲ್ಲಾ ಬ್ರಾಹ್ಮಣ್ಯಗಳ ನಡುವೆ ಈ ಸರ್ಕಾರ ವಿಧಾನಸೌಧದಲ್ಲಿ ಭುವನೇಶ್ವರಿ ಪ್ರತಿಮೆ ಸ್ಥಾಪನೆ ಮಾಡಿದ್ದಾರೆ. ಕನ್ನಡ ಶಾಲೆಗಳಲ್ಲಿ ಕನ್ನಡದ ಪ್ರಾಬಲ್ಯ ಹೆಚ್ಚಿಸಲು ಕಾನೂನು ತರಬೇಕು. ಕನ್ನಡ ಮಾಧ್ಯಮದಲ್ಲಿ ಓದಿರೋರಿಗೆ ಉದ್ಯೋಗ ಕಲ್ಪಿಸಿಕೊಡಿ. ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಿಕೊಡಿ. ಅದು ನಿಜವಾದ ಕನ್ನಡ ಅಭಿಮಾನ. ಹೊರತು ಭುವನೇಶ್ವರಿ ಪ್ರತಿಮೆ ಸ್ಥಾಪನೆ ಮಾಡುವುದಲ್ಲ ಎಂದು ಚೇತನ್‌ ನುಡಿದಿದ್ದಾರೆ.