News Karnataka Kannada
Wednesday, April 17 2024
Cricket
ಮನರಂಜನೆ

ಜಪಾನ್‌ನಲ್ಲಿ ನಡೆಯಲಿದೆ ‘ಪುಷ್ಪ 2’ ಸಿನಿಮಾ ಚಿತ್ರೀಕರಣ

ಅಲ್ಲು ಅರ್ಜುನ್ , ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’ ಸಿನಿಮಾ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ಅದ್ರ ನಡುವೆಯೇ  ಬಿಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. ಸದ್ಯ ಹೈದರಾಬಾದ್‌ನಲ್ಲಿ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಇದೀಗ ಮುಂದಿನ ಹಂತದ ಶೂಟಿಂಗ್ ಜಪಾನ್‌ನಲ್ಲಿ ಸಾಗಲಿದೆ. 
Photo Credit : News Kannada

ಬೆಂಗಳೂರು: ಅಲ್ಲು ಅರ್ಜುನ್ , ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’ ಸಿನಿಮಾ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ಅದ್ರ ನಡುವೆಯೇ  ಬಿಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. ಸದ್ಯ ಹೈದರಾಬಾದ್‌ನಲ್ಲಿ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಇದೀಗ ಮುಂದಿನ ಹಂತದ ಶೂಟಿಂಗ್ ಜಪಾನ್‌ನಲ್ಲಿ ಸಾಗಲಿದೆ.

ಪುಷ್ಪ ಪಾರ್ಟ್ 2ಗೆ ‘ಪುಷ್ಪ: ದಿ ರೈಸ್’ ನ ಮೊದಲ ಭಾಗದಲ್ಲಿ ವಿದೇಶದ ರೆಫರೆನ್ಸ್ ನೀಡಲಾಗಿತ್ತು. ರಕ್ತಚಂದನ ಜಪಾನ್‌ಗೆ ರಫ್ತಾಗಲಿದೆ ಎಂದು ತೋರಿಸಲಾಗಿತ್ತು. ಈಗ ಎರಡನೇ ಭಾಗದಲ್ಲಿ ಸಿನಿಮಾದ ಒಂದಷ್ಟು ಕಥೆ ವಿದೇಶದಲ್ಲೇ ಸಾಗಲಿದೆ ಎನ್ನಲಾಗಿದೆ.

ಅಲ್ಲು ಅರ್ಜುನ್, ನಿರ್ದೇಶಕ ಸುಕುಮಾರ್, ರಶ್ಮಿಕಾ ಸೇರಿದಂತೆ ಇಡೀ ಟೀಮ್ ಜಪಾನ್ ಹೋಗಲಿದ್ದಾರೆ. ಅಲ್ಲಿ ಸಿನಿಮಾದ ಶೂಟಿಂಗ್ ನಡೆಯಲಿದ್ದು, ಕೆಲ ವಿದೇಶಿ ಕಲಾವಿದರು ಕೂಡ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಈ ಚಿತ್ರದಲ್ಲಿ ಶ್ರೀವಲ್ಲಿ (ರಶ್ಮಿಕಾ ಮಂದಣ್ಣ) ಪಾತ್ರ ಮತ್ತಷ್ಟು ಪವರ್‌ಫುಲ್ ಆಗಿ ತೋರಿಸಲು ನಿರ್ದೇಶಕರು ಯೋಚಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು