ಮನರಂಜನೆ

ಡಿ.1 ರಂದು ಅದ್ದೂರಿಯಾಗಿ ತೆರೆಕಾಣಲಿದೆ “ರಾಪಟ”

ಮಂಗಳೂರು: ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಡಿ.1 ರಂದು ಅದ್ದೂರಿಯಾಗಿ ಕರಾಳಿಯಾದ್ಯಂತ ತೆರೆಕಾಣಲಿದೆ.

ತುಳುನಾಡಿನ ಹಾಸ್ಯ ದಿಗ್ಗಜರು ಚಿತ್ರದಲ್ಲಿ ನಟಿಸಿದ್ದು, ತಾಂತ್ರಿಕ ವಿಭಾಗದಲ್ಲೂ ಅನುಭವಿ ತಂಡ ಕೆಲಸ ಮಾಡಿದೆ. ಸಂಪೂರ್ಣ ಹಾಸ್ಯ ಮನರಂಜನೆಯ ರಾಪಟ ಸಿನಿಮಾದಲ್ಲಿ ಉತ್ತಮ ಕತೆ ಇದೆ. ಅರ್ಜುನ್ ಕಾಪಿಕಾಡ್ ನಿರ್ದೇಶನದ ಸಿನಿಮಾದಲ್ಲಿ ಖ್ಯಾತ ಕಲಾವಿದರು ಅಭಿನಯಿಸಿದ್ದಾರೆ. ಅನೂಪ್ ಸಾಗರ್ ನಾಯಕ ನಟನಾಗಿ ಹಾಗೂ ನಿರೀಕ್ಷ ಶೆಟ್ಟಿ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ತುಳು ಚಿತ್ರ ರಂಗದ ದಿಗ್ಗಜರಾದ ದೇವದಾಸ್ ಕಾಪಿಕಾಡ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ಸಾಯಿ ಕೃಷ್ಣ ಕುಡ್ಲ, ದೀಪಕ್ ರೈ ಪಾಣಾಜೆ, ರೂಪಶ್ರೀ ವರ್ಕಾಡಿ , ಪ್ರಕಾಶ್ ತೂಮಿನಾಡು, ವಿಕೀಶಾ, ರವಿರಾಮ ಕುಂಜ ಮುಂತಾದವರು ನಟಿಸಿದ್ದು, ಸಹ ನಿರ್ದೇಶಕರಾಗಿ ಶನಿಲ್ ಗುರು, ಸಿನಿಮಾಟೋಗ್ರಾಫರ್ ರಾಗಿ ಸಚಿನ್ ಎಸ್.ಶೆಟ್ಟಿ, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಸಂದೀಪ್ ಶೆಟ್ಟಿ, ಎಡಿಟರ್ ಯಶ್ವಿನ್.ಕೆ. ಶೆಟ್ಟಿಗಾರ್, ಸಂಗೀತ ಪ್ರಸಾದ್.ಕೆ. ಶೆಟ್ಟಿ, ನಿರ್ಮಾಪಕರಾಗಿ ಸಂತೋಷ್ ಸುವರ್ಣ, ಸೂರ್ಯಕಾಂತ್ ಸುವರ್ಣ, ರಾಜನ್ ರಾಕೇಶ್ ಶೆಟ್ಟಿ, ಆಶಿಕಾ ಸುವರ್ಣ, ದೇವಿಕಾ ಆಚಾರ್ಯ, ಶೈಲರಾಜ್ ಪೂಜಾರಿ, ಅಭಿಶೆಟ್ಟಿ, ಮನೋಜ್‌ಶೆಟ್ಟಿ, ಯಕ್ಷಿತ್ ಶೆಟ್ಟಿ, ಮಧು ಕುಮಾರ್ ಕಾರ್ಯನಿರ್ವಹಿಸಿದ್ದಾರೆ. ರಾಪಟ ತುಳು ಸಿನಿಮಾ ಸೆಪ್ಟೆಂಬರ್ 9 ಮತ್ತು 10ರಂದು ಯುಎಇ, ಸೆ. 15ರಂದು ಬಹರೈನ್, ಸೆ.22ರಂದು ಮಸ್ಕತ್, ಸೆ.29ರಂದು ಕತಾರ್‌ನಲ್ಲಿ ಪ್ರೀಮಿಯರ್ ಶೋ ನಡೆದಿದ್ದು, ಸಿನಿಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡಿದೆ.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

4 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

4 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

4 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

5 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

5 hours ago