ಯುವ ಪ್ರತಿಭೆ ವಂಶಿ ನಟಿಸಿ, ನಿರ್ದೇಶಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ಫೈರ್ ಫ್ಲೈ. ಈ ಚಿತ್ರ ನಾನಾ ಕಾರಣಗಳಿಂದ ನಿರೀಕ್ಷೆ ಹೆಚ್ಚಿಸಿದೆ. ಅದರಲ್ಲಿ ಪ್ರಮುಖವಾಗಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್ ಚಿತ್ರ ನಿರ್ಮಾಣ ಮಾಡುತ್ತಿರುವುದು ಒಂದು ವಿಷೇಶ.
ಈಗಾಗಲೇ ಫೈರ್ ಫ್ಲೈ ಸಿನಿತಂಡ ಸುಧಾರಾಣಿ, ಅಚ್ಯುತ್ ಕುಮಾರ್ , ಶೀತಲ್ ಶೆಟ್ಟಿ ಸೇರಿದಂತೆ ಹಲವರನ್ನು ಪರಿಚಯಿಸಿದೆ. ಇದೀಗ ಚಿತ್ರದ ನಾಯಕಿ ಯಾರು ಅನ್ನೋದನ್ನು ಅನಾವರಣ ಮಾಡಿದೆ. ಲವ್ ಮಾಕ್‌ಟೇಲ್, ಹರಿಕಥೆ ಅಲ್ಲ ಗಿರಿಕಥೆ, ತ್ರಿಬಲ್ ರೈಡಿಂಗ್ ಸಿನಿಮಾಗಳಲ್ಲಿ ಬಬ್ಲಿ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ರಚನಾ ಇಂದರ್ ವಂಶಿಗೆ ಜೋಡಿಯಾಗಿ ಅಭಿನಯಿಸಿದ್ದಾರೆ. ಇನ್ನು ಈ ಚಿತ್ರದಲ್ಲಿ ನೇಹಾ ಎಂಬ ಪಾತ್ರದಲ್ಲಿ ರಚನಾ ಬಣ್ಣ ಹಚ್ಚಿದ್ದಾರೆ.

