Ad

ಕುಟುಂಬ ಸಮೇತರಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ

: ನಟ ರಕ್ಷಿತ್ ಶೆಟ್ಟಿ ಅವರು ಕುಟುಂಬ ಸಮೇತರಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿದ್ದರು.

ಉಡುಪಿ: ನಟ ರಕ್ಷಿತ್ ಶೆಟ್ಟಿ ಅವರು ಕುಟುಂಬ ಸಮೇತರಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿದ್ದರು. ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ವಾಸುದೇವ ಶೆಟ್ಟಿ ಮಾರಿಯಮ್ಮನ ಸನ್ನಿಧಾನದಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು.

Ad
300x250 2

ದೇವಳದ ಜೀರ್ಣೋದ್ಧಾರದ ಆರ್ಥಿಕ ಸಮಿತಿಯ ಕಾತ್ಯಾಯಿನಿ ತಂಡದ ಮುಖ್ಯ ಸಂಚಾಲಕಿ ಬೀನಾ ವಿ. ಶೆಟ್ಟಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು, ನಟ ರಕ್ಷಿತ್ ಶೆಟ್ಟಿ ಕುಟುಂಬಸ್ಥರೊಂದಿಗೆ ದೇವಳದ ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿದರು. ಈ ಸಂದರ್ಭ ರಶ್ಮಿತ್ ನಿಖಿಲ್ ಶೆಟ್ಟಿ ಇವರು ಕಾಪುವಿನ ಅಮ್ಮನ ಸ್ವರ್ಣ ಗದ್ದುಗೆಗೆ 9 ಗ್ರಾಂ ಸ್ವರ್ಣ ಸಮರ್ಪಿಸಿದರು. ರಕ್ಷಿತ್ ಶೆಟ್ಟಿ ಅವರ ತಾಯಿ ರಂಜನಾ ಶ್ರೀಧರ್ ಶೆಟ್ಟಿ ಮತ್ತು ಸಹೋದರ ರಂಜಿತ್ ಶೆಟ್ಟಿ ಉಪಸ್ಥಿತರಿದ್ದರು.

Ad
Ad
Nk Channel Final 21 09 2023
Ad