Bengaluru 22°C
Ad

ಹುಟ್ಟುಹಬ್ಬದ ಸಂಭ್ರಮದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

Rakshit

ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಗೆ ಇಂದು 41ನೇ (ಜೂನ್ 6) ಹುಟ್ಟುಹಬ್ಬದ ಸಂಭ್ರಮ.ಈ ಹಿನ್ನೆಲೆಯಲ್ಲಿ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

ಚಿತ್ರರಂಗದ ಗಣ್ಯರು, ಸ್ನೇಹಿತರು ಸೇರಿದಂತೆ ಅನೇಕರು ರಕ್ಷಿತ್ ಶೆಟ್ಟಿ ಅವರಿಗೆ ಶುಭಾಶಯ ಕೋರಿದ್ದಾರೆ. ಕನ್ನಡ ಚಿತ್ರರಂಗದ ಪ್ರಯೋಗಶೀಲ ನಟ ಮತ್ತು ನಿರ್ದೇಶಕರಾದ ರಕ್ಷಿತ್ ಶೆಟ್ಟಿ 1983 ರಂದು ಉಡುಪಿಯಲ್ಲಿ ಜನಿಸಿದರು.

ಅವರು ಕನ್ನಡ ಚಿತ್ರರಂಗಕ್ಕೆ ಹೊಸ ಅಲೆಯ ಸಿನಿಮಾಗಳನ್ನು ನೀಡಿದ್ದಾರೆ. ನಟ, ನಿರ್ದೇಶಕ, ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ.

‘ಉಳಿದವರು ಕಂಡಂತೆ’, ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಕಿರಿಕ್ ಪಾರ್ಟಿ’, ‘ಅವನೇ ಶ್ರೀಮನ್ನಾರಾಯಣ’, ‘777 ಚಾರ್ಲಿ’, ‘ಸಪ್ತಸಾಗರದಾಚೆಯೆಲ್ಲೋ’, ‘ರಿಕ್ಕಿ’, ‘ವಾಸ್ತು ಪ್ರಕಾರ’, ‘ಸಿಂಪಲ್ಲಾಗ್ ಒಂದು ಲವ್ ಸ್ಟೋರಿ’ ಸೇರಿದಂತೆ ಹಲವು ಚಿತ್ರಗಳಲ್ಲಿ ರಕ್ಷಿತ್ ಶೆಟ್ಟಿ ನಟಿಸಿದ್ದಾರೆ. ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

Ad
Ad
Nk Channel Final 21 09 2023
Ad