ರಾಮ್ ಚರಣ್ ತಮ್ಮ ಹೊಸ ಸಿನಿಮಾವನ್ನು ಘೋಷಿಸಿದ್ದಾರೆ. ಅವರ 17ನೇ ಸಿನಿಮಾ ಇದಾಗಿದ್ದು, ಪುಷ್ಪ ಸಿನಿಮಾ ನಿರ್ದೇಶಕ ಸುಕುಮಾರ್ ಜೊತೆ ಕೆಲಸ ಮಾಡಲಿದ್ದಾರೆ. ಈ ಚಿತ್ರಕ್ಕೆ ದೇವಿಶ್ರೀ ಪ್ರಸಾದ್ ಸಂಗೀತ ನಿರ್ದೇಶನವಿರುತ್ತದೆ.
೨೦೨೨ರಲ್ಲಿ ತೆರೆಕಂಡ RRR ನಂತರ ರಾಮ್ ಚರಣ್ರ ಯಾವುದೇ ಸಿನಿಮಾ ಬಿಡುಗಡೆಯಾಗಿಲ್ಲ. ಹೀಗಿರುವಾಗ ಹೋಳಿ ಹಬ್ಬದ ಸಂದರ್ಭದಲ್ಲಿ ಘೋಷಣೆಯಾದ ಈ ಸಿನಿಮಾ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.