ಹಿರಿಯ ನಟ ರಮೇಶ್ ಅರವಿಂದ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಹೊಸ ಸಿನಿಮಾ ಸೆಟ್ಟೇರಿದೆ. ಗೌರಿ ಹಬ್ಬದ ಶುಭ ದಿನದಂದು ಮುಹೂರ್ತ ನೆರವೇರಿದೆ. ರಮೇಶ್ ಅರವಿಂದ್ ಹಾಗೂ ಗಣೇಶ್ ಸಂಗಮದ ಹೊಸ ಸಿನಿಮಾಗೆ Your’s sincerely ರಾಮ್ ಎಂಬ ಟೈಟಲ್ ಇಡಲಾಗಿದೆ. ಫಸ್ಟ್ ಲುಕ್ ಕೂಡ ಬಿಡುಗಡೆ ಮಾಡಲಾಗಿದ್ದು, ಬಹಳ ಇಂಪ್ರೆಸಿವ್ ಆಗಿ ಮೂಡಿಬಂದಿದೆ.
ಪುಷ್ಪಕ ವಿಮಾನ, ಇನ್ಸ್‌ಪೆಕ್ಟರ್ ವಿಕ್ರಮ್, ಮಾನ್ಸೂನ್ ರಾಗದಂತಹ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ವಿಖ್ಯಾತ್ ಎ ಆರ್ ಈ ಚಿತ್ರದ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದಾರೆ. ದಿ ರಾಯಲ ಸ್ಟುಡಿಯೋಸ್ ಬ್ಯಾನರ್ ನಡಿ ಸತ್ಯ ರಾಯಲ Your’s sincerely ರಾಮ್ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.
ನವೀನ್ ಕುಮಾರ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಜೆ ಅನೂಪ್ ಸೀಳಿನ್ ಸಂಗೀತ, ಗುಣ ಕಲಾ ನಿರ್ದೇಶನ , ಪ್ರಶಾಂತ್ ರಾಜಪ್ಪ , ಯದುನಂದನ್ ಹಾಗೂ ಸಚಿನ್ ಸಂಭಾಷಣೆ ಚಿತ್ರಕ್ಕಿದೆ. ಆಡಿಯೊ ಹಕ್ಕುಗಳು ಆನಂದ್ ಆಡಿಯೊಗೆ ದಾಖಲೆ ಬೆಲೆಗೆ ಮಾರಾಟವಾಗಿದೆ.
Ad