Bengaluru 23°C
Ad

ದರ್ಶನ್​ಗೆ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ; ರೀಟ್ವೀಟ್ ಮಾಡಿದ ನಟಿ ರಮ್ಯಾ

Ramya

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಅನ್ನು ಪೊಲೀಸರು ಬಂಧಿಸಿದ್ದಾರೆ. ದರ್ಶನ್ ವಿಚಾರಣೆ ನಡೆಯುತ್ತಿದ್ದು ಇಂದೇ ದರ್ಶನ್ ಅನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ನಿರೀಕ್ಷೆ ಇದೆ.

ಇದರ ನಡುವೆ ನಟಿ ರಮ್ಯಾ, ದರ್ಶನ್​ಗೆ ಯಾವ ರೀತಿಯ ಶಿಕ್ಷೆ ಆಗಲಿದೆ ಎಂಬ ಬಗ್ಗೆ ಮಾಡಲಾಗಿರುವ ಟ್ವೀಟ್ ಒಂದನ್ನು ರೀಟ್ವೀಟ್ ಮಾಡಿದ್ದಾರೆ. ಕರ್ನಾಟಕ ಬಾಕ್ಸ್ ಆಫೀಸ್ ಹೆಸರಿನ ಟ್ವಿಟ್ಟರ್ ಖಾತೆಯಿಂದ ‘ದರ್ಶನ್​ಗೆ ಸೆಕ್ಷನ್ 302ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ಅಥವಾ ಮರಣ ದಂಡನೆ ಶಿಕ್ಷೆ ವಿಧಿಸಲಾಗುತ್ತದೆ.

ಒಂದೊಮ್ಮೆ ಈ ಪ್ರಕರಣದಲ್ಲಿ ದರ್ಶನ್​ಗೆ ಶಿಕ್ಷೆ ಆಗದಿದ್ದಲ್ಲಿ ಹಣದ ಪ್ರಭಾವ ಕೆಲಸ ಮಾಡಿದೆ ಎಂದರ್ಥ ಹಾಗೂ ಭಾರತೀಯ ಕಾನೂನು ವ್ಯವಸ್ಥೆ ಎಷ್ಟು ದುರ್ಬಲವಾಗಿದೆ ಎಂದು ತೋರಿದಂತಾಗುತ್ತದೆ. ಸಂತ್ರಸ್ತರಿಗೆ ಸಿಗಬೇಕಾದ ನ್ಯಾಯ ಸಿಗುತ್ತದೆ ಎಂದು ಆಶಿಸುತ್ತೇವೆ’ ಎಂದು ಟ್ವೀಟ್ ಮಾಡಲಾಗಿದೆ. ಈ ಟ್ವೀಟ್ ಅನ್ನು ನಟಿ ರಮ್ಯಾ ರೀಟ್ವೀಟ್ ಮಾಡಿದ್ದಾರೆ.

https://x.com/Karnatakaa_BO/status/1800410187347738894

Ad
Ad
Nk Channel Final 21 09 2023
Ad