ಗುರುತೇ ಸಿಗದಷ್ಟು ಬದಲಾದ ನಟ ರಣದೀಪ್ ಹೂಡಾ: ಶಹಭಾಷ್ ಎಂದ ನೆಟ್ಟಿಗರು

‘ಸ್ವಾತಂತ್ರ್ಯ ವೀರ ಸಾವರ್ಕರ್​’ ಸಿನಿಮಾ ಪ್ರಮೋಷನ್​ನಲ್ಲಿ ನಟ ರಣದೀಪ್​ ಹೂಡಾ ಬ್ಯುಸಿ ಆಗಿದ್ದಾರೆ. ಈ ಸಿನಿಮಾವನ್ನು ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇದು ವಿನಾಯಕ್​ ದಾಮೋದರ್​ ಸಾವರ್ಕರ್‌ಅವರ ಬದುಕಿನ ವಿವರವನ್ನು ಆಧರಿಸಿ ತಯಾರಾದ ಸಿನಿಮಾ.

ಸಿನಿಮಾದಲ್ಲಿ ಸಾವರ್ಕರ್​ ಪಾತ್ರದಲ್ಲಿ ರಣದೀಪ್ ಹೂಡಾ ಕಾಣಿಸಿಕೊಂಡಿದ್ದು, ಪಾತ್ರದ ಮೇಲಿನ ಗೌರವ ಹಾಗೂ ಬದ್ಧತೆಗಾಗಿ ರಣದೀಪ್​ ಹೂಡಾ ಅಚ್ಚರಿಯ ರೀತಿಯಲ್ಲಿ ಬಾಡಿ ಟ್ರಾನ್ಸ್​ಫಾರ್ಮೇಷನ್​ ಮಾಡಿಕೊಂಡಿದ್ದಾರೆ.

‘ಸ್ವಾತಂತ್ರ್ಯ ವೀರ ಸಾವರ್ಕರ್​’ ಸಿನಿಮಾ ಮಾರ್ಚ್​ 22ರಂದು ಬಿಡುಗಡೆ ಆಗಲಿದೆ. ಸಿನಿಮಾದ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಇರುವಾಗ ರಣದೀಪ್ ಹೂಡಾ ಅವರು ಒಂದು ಫೋಟೋ ಹಂಚಿಕೊಂಡಿದ್ದಾರೆ. ಹೂಡಾ ಹಂಚಿಕೊಂಡಿರುವ ಫೋಟೋದಲ್ಲಿ ಗುರುತೇ ಸಿಗದಷ್ಟು ಬದಲಾಗಿದ್ದಾರೆ.

ಕಟ್ಟುಮಸ್ತಾದ ಬಾಡಿ ಹೊಂದಿದ್ದ ರಣದೀಪ್​ ಹೂಡಾ ಅವರು ಸಾವರ್ಕರ್​ ಪಾತ್ರಕ್ಕಾಗಿ ಸಿಕ್ಕಾಪಟ್ಟೆ ತೆಳ್ಳಗಾಗಿದ್ದಾರೆ. ಅಂದಾಜು 30 ಕೆಜಿ ದೇಹದ ತೂಕವನ್ನು ಅವರು ಕಡಿಮೆ ಮಾಡಿಕೊಂಡಿದ್ದು, ಎದೆಗೂಡಿನ ಮೂಳೆಗಳು ಕಾಣುವ ರೀತಿಯಲ್ಲಿ ಬದಲಾಗಿದ್ದಾರೆ. ಇವರಿಗೆ ಸಿನಿಮಾದ ಮೇಲಿನ ಪ್ರೀತಿ ನೋಡಿ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ರಣದೀಪ್​ ಹೂಡಾ ನಟನೆಯ ‘ಸ್ವಾತಂತ್ರ್ಯ ವೀರ ಸಾವರ್ಕರ್​’ ಚಿತ್ರ ಮಾರ್ಚ್ 22ರಂದು ತೆರೆಗೆ ಬರ್ತಿದ್ದು ನಟಿ ಅಂಕಿತಾ ಲೋಖಂಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ತುಂಬಾ ಸ್ಲಿಮ್​ ಆಗಿ ಕಾಣ್ತಿರುವ ರಣದೀಪ್ ಹೂಡಾ, ಶಾರ್ಟ್ಸ್ ತೊಟ್ಟಿದ್ದಾರೆ. ಈ ಫೋಟೋವನ್ನು ಹಂಚಿಕೊಂಡ ರಣದೀಪ್, “ಕಾಲಾ ಪಾನಿ” ಎಂದು ಬರೆದಿದ್ದಾರೆ. ರಣದೀಪ್ ಸೆಲ್ಯುಲಾರ್ ಜೈಲ್ ದೃಶ್ಯದ ಚಿತ್ರೀಕರಣದ ಸಮಯದಲ್ಲಿ ಈ ಫೋಟೋ ತೆಗೆಯಲಾಗಿದೆ ಎನ್ನಲಾಗ್ತಿದೆ.

https://www.facebook.com/photo.php?fbid=1010276120454417&set=a.290792479069455&type=3&ref=embed_post

ಇನ್ನು ಚಿತ್ರವು ಇತಿಹಾಸವನ್ನು ಹೊಸ ಪೀಳಿಗೆಗೆ ಕೊಂಡೊಯ್ಯುವ ಕೆಲಸ ಮಾಡುತ್ತದೆ ಎಂದು ರಂಜಿತ್ ಸಾವರ್ಕರ್ ಹೇಳಿದ್ರು. ರಣದೀಪ್ ಹೂಡಾ ಅವರು ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಚಿತ್ರದಲ್ಲಿ ಮುಖ್ಯ ಪಾತ್ರವನ್ನು ನಿರ್ವಹಿಸಿದ್ದಾರೆ ಮಾತ್ರವಲ್ಲದೆ ಅವರೇ ಚಿತ್ರವನ್ನು ನಿರ್ದೇಶಿಸಿದ್ದಾರೆ . ನಿರ್ದೇಶಕರಾಗಿ ಇದು ಅವರ ಮೊದಲ ಚಿತ್ರ. ರಣದೀಪ್ ಹೂಡಾ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಚಿತ್ರವನ್ನು ತಾವೇ ನಿರ್ಮಿಸಿದ್ದಾರೆ.

Ashitha S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

1 hour ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

2 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

2 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

2 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

3 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

4 hours ago