Categories: ಮನರಂಜನೆ

ರಶ್ಮಿಕಾ, ದೇವರಕೊಂಡ ಮದುವೆ ಆಗ್ತಾರೆ ಆದ್ರೆ ಮುಂದೆ: ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ

ವೇಣು ಸ್ವಾಮಿ ತೆಲುಗು ರಾಜ್ಯಗಳಲ್ಲಿ ಅತಿಜನಪ್ರಿಯ ಜ್ಯೋತಿಷಿ. ಹಲವು ಸೆಲೆಬ್ರಿಟಿಗಳು ಸೇರಿದಂತೆ ಗಣ್ಯರು ಇವರಲ್ಲಿ ಜ್ಯೋತಿಷ್ಯ ಕೇಳುತ್ತಾರೆ. ಆ ವೇಣುಸ್ವಾಮಿ ಇದೀಗ ರಶ್ಮಿಕಾ ಮಂದಣ್ಣ ಬಗ್ಗೆ ವೈವಾಹಿಕ ಬದುಕಿನ ಬಗ್ಗೆ ಮಾತನಾಡಿದ್ದಾರೆ. ರಶ್ಮಿಕಾ ಮಂದಣ್ಣ ತಮ್ಮ ವೃತ್ತಿ ಬದುಕಿನ ಆರಂಭದಲ್ಲಿದ್ದಾಗ ಇದೇ ವೇಣು ಸ್ವಾಮಿ ಅವರಿಂದ ವಿಶೇಷ ಪೂಜೆ ಮಾಡಿಸಿದ್ದರು. ಇವರ ಸಲಹೆ ಪಡೆದೇ ರಕ್ಷಿತ್ ಶೆಟ್ಟಿ ಜೊತೆಗಿನ ಮದುವೆ ಮುರಿದುಕೊಂಡು ವೃತ್ತಿ ಬದುಕಿನ ಕಡೆಗೆ ಹೆಚ್ಚು ಗಮನವಹಿಸಿ ಯಶಸ್ಸು ಗಳಿಸಿದ್ದರು.

ಇತ್ತಿಚೆಗೆ ಯೂಟ್ಯೂಬ್​ ಚಾನೆಲ್​ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ರಶ್ಮಿಕಾ ಹಾಗೂ ವಿಜಯ್​ ದೇವರಕೊಂಡ ಬಗ್ಗೆ ಮಾತನಾಡಿರುವ ವೇಣು ಸ್ವಾಮಿ, ‘‘ರಶ್ಮಿಕಾ ಹಾಗೂ ವಿಜಯ್ ದೇವರೊಂಡ ಪರಸ್ಪರ ಪ್ರೀತಿಯಲ್ಲಿರುವುದು ಗುಟ್ಟೇನೂ ಅಲ್ಲ. ಅವರಿಬ್ಬರು ವಿವಾಹ ಆಗಲಿದ್ದಾರೆ. ಆದರೆ ವಿವಾಹವಾದ ಬಳಿಕ ಇಬ್ಬರೂ ದೂರಾಗಲಿದ್ದಾರೆ. ಇದು ಖಚಿತ’’ ಎಂದಿದ್ದಾರೆ.

‘‘ವಿಜಯ್ ದೇವರಕೊಂಡ ಜೊತೆ ಮದುವೆಯಾದರೆ ವಿಚ್ಛೇದನ ಆಗಲಿದೆ ಎಂದು ನಾನು ನೇರವಾಗಿ ರಶ್ಮಿಕಾ ಮಂದಣ್ಣ ಅವರಿಗೆ ಹೇಳಿದ್ದೇನೆ. ಇದೇ ಕಾರಣಕ್ಕೆ ಅವರು ನನ್ನೊಂದಿಗೆ ಮಾತನಾಡುವುದು ಬಿಟ್ಟು, ನನ್ನ ಸಂಪರ್ಕ ಕಡಿದುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಸಮಾಜಕ್ಕೆ ನಾಯಕಿ ಆಗಿರಬಹುದು ಆದರೆ ನನಗೆ ಕೇವಲ ಕ್ಲೈಂಟ್ ಅಷ್ಟೆ. ಅವರ ಜನಪ್ರಿಯತೆ ನೋಡಿ ನಾನು ಭವಿಷ್ಯ ಹೇಳುವುದಿಲ್ಲ, ಅವರ ಗ್ರಹಗತಿ ನೋಡಿ ಭವಿಷ್ಯ ಹೇಳುತ್ತೇನೆ. ನಾನು ಹೇಳಿದ ನಿಜ ಅವರಿಗೆ ಹಿಡಿಸಲಿಲ್ಲ, ಇರಲಿ ಪರವಾಗಿಲ್ಲ, ಆದರೆ ಅವರಿಬ್ಬರು ಮದುವೆಯಾಗಿ ದೂರಾಗುವುದು ಖಚಿತ’’ ಎಂದಿದ್ದಾರೆ ವೇಣು ಸ್ವಾಮಿ.

‘ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ನಟಿಸಿದ ಬಳಿಕ ವೇಣು ಸ್ವಾಮಿ ಅವರ ಬಳಿ ರಶ್ಮಿಕಾ ಮಂದಣ್ಣ ವಿಶೇಷ ಪೂಜೆ ಮಾಡಿಸಿದ್ದರು. ಆ ವೇಳೆಗೆ ರಕ್ಷಿತ್ ಶೆಟ್ಟಿ ಜೊತೆ ರಶ್ಮಿಕಾರ ಮದುವೆ ಸಹ ನಿಗದಿಯಾಗಿತ್ತು. ಆದರೆ ವೇಣು ಸ್ವಾಮಿಯ ಸಲಹೆಯಂತೆ ರಕ್ಷಿತ್ ಶೆಟ್ಟಿ ಜೊತೆ ಮದುವೆ ಮುರಿದುಕೊಂಡರು ರಶ್ಮಿಕಾ. ಈ ವಿಷಯವನ್ನು ಸ್ವತಃ ವೇಣು ಸ್ವಾಮಿ ಹಲವು ಸಂದರ್ಶನಗಳಲ್ಲಿ ಹೇಳಿಕೊಂಡಿದ್ದಾರೆ.

Gayathri SG

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

32 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

59 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

1 hour ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago