ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿರುವ ರಶ್ಮಿಕಾ ಮಂದಣ್ಣ ಅವರ ಅಭಿಮಾನಿ ಬಳಗ ಹಿರಿದಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು ಹಿಂಬಾಲಿಸುವವರ ಸಂಖ್ಯೆ ದೊಡ್ಡದಾಗುತ್ತಲೇ ಇದೆ. ಇನ್ಸ್ಟಾಗ್ರಾಮ್ನಲ್ಲಿ ರಶ್ಮಿಕಾ ಮಂದಣ್ಣ ಅವರನ್ನು ಬರೋಬ್ಬರಿ 40 ಮಿಲಿಯನ್, ಅಂದರೆ 4 ಕೋಟಿ ಜನರು ಫಾಲೋ ಮಾಡುತ್ತಿದ್ದಾರೆ.
ಇದರ ಜೊತೆ ‘ಅನಿಮಲ್’ ಸಿನಿಮಾ ಕೂಡ ಗೆದ್ದಿರುವುದು ನಟಿಯ ಪಾಲಿಗೆ ಡಬಲ್ ಖುಷಿ ನೀಡಿದೆ.
ಬಾಲಿವುಡ್ನಲ್ಲಿ ಅಮಿತಾಭ್ ಬಚ್ಚನ್ ಜೊತೆ ‘ಗುಡ್ಬೈ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ತೆರೆ ಹಂಚಿಕೊಂಡರು. ನಂತರ ‘ಮಿಷನ್ ಮಜ್ನು’ ಸಿನಿಮಾದಲ್ಲಿ ಸಿದ್ದಾರ್ಥ್ ಮಲ್ಹೋತ್ರಾಗೆ ಜೋಡಿಯಾಗಿ ಅವರು ಅಭಿನಯಿಸಿದರು.
ಈಗ ರಣಬೀರ್ ಕಪೂರ್ ಜೊತೆ ‘ಅನಿಮಲ್’ ಸಿನಿಮಾದಲ್ಲಿ ನಟಿಸಿ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಜೊತೆಗೆ ರಶ್ಮಿಕಾ ಮಂದಣ್ಣ ಅವರ ಫಾಲೋವರ್ಸ್ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ.